ಕನಕಪುರ: ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ತೆರಿಗೆದೊಡ್ಡಿ ಗ್ರಾಮದ ಗೌರಿಬಾಯಿ ರಾಮನಾಯ್ಕ ಅವರಿಗೆ ಸೇರಿದ ಕೋಳಿ ಫಾರಂ ಅನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಈ ಕುರಿತು ಕೊಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ವಿಕಾಸ್ ಗೌಡ ಮತ್ತು ಕೋಡಿಹಳ್ಳಿ ಎಸ್ಐ ಪ್ರದೀಪ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ದೂರದಾರರಾದ ಗೌರಿಬಾಯಿ, ‘ನಮ್ಮ ಕೋಳಿ ಫಾರಂ ಅನ್ನು ನಾಶಗೊಳಿಸಿರುವವರು ನಿತ್ಯ ನಮಗೆ ಕಿರುಕುಳ ನೀಡುತ್ತಿದ್ದಾರೆ. ನಮಗೆ ಬದುಕಲು ಬಿಡುತ್ತಿಲ್ಲ. ನಮಗೆ ನ್ಯಾಯ ಮತ್ತು ರಕ್ಷಣೆ ಕೊಡಿ. ಇಲ್ಲದಿದ್ದರೆ, ಆತ್ಮಹತ್ಯೆಯೊಂದೇ ನಮಗಿರುವ ದಾರಿ’ ಎಂದು ಪೊಲೀಸರ ಎದುರು ಅಳಲು ತೋಡಿಕೊಡರು.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಲ್ಲಾ ಆಯಾಮದಿಂದಲೂ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗುವಂತೆ ಮಾಡಲಾಗುವುದು ಎಂದು ಪೊಲೀಸರು ಭರವಸೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-14-1481716444

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.