ಕನಕಪುರ: ಪರೀಕ್ಷೆಗೆ ಚೆನ್ನಾಗಿ ಓದು ಎಂದು ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ಬೇಸರಗೊಂಡ ದ್ವಿತೀಯ ಪಿಯು ವಿದ್ಯಾರ್ಥಿ ಕಾಲೇಜಿನ ಕಟ್ಟಡದ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆದಿತ್ಯ ಪಿಯು ಕಾಲೇಜಿನ ಶ್ರೀನಿವಾಸ್ (18) ಮೃತ ವಿದ್ಯಾರ್ಥಿ. ತಾಲ್ಲೂಕಿನ ಸಂತೆ ಕೋಡಿಹಳ್ಳಿಯಲ್ಲಿ ಬೇಕರಿ ಹೊಂದಿರುವ ಮೂಲತಃ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ದಂಟಳ್ಳಿ ಗ್ರಾಮದ ಮಹದೇವ ಪ್ರಭು ಅವರ ಪುತ್ರನಾದ ಶ್ರೀನಿವಾಸ್, ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದ. ಪರೀಕ್ಷೆ ಸಮೀಪಿಸಿದರೂ ಶ್ರೀನಿವಾಸ್ ಓದಿನ ಕಡೆಗೆ ಸರಿಯಾಗಿ ಗಮನ ಕೊಡದೆ ಮೊಬೈಲ್ನಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದ. ಪೋಷಕರು ಬುದ್ಧಿವಾದ ಹೇಳುತ್ತಿದ್ದರು ಎಂದು ಕನಕ ಪುರ ಟೌನ್ ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.