ಕನಕಪುರ: ತಾಲ್ಲೂಕಿನ ಜನರ ಶೈಕ್ಷಣಿಕ ಪ್ರಗತಿಗಾಗಿ ರೂರಲ್ ಎಜುಕೇಶನ್ ಸೊಸೈಟಿ ಮೂಲಕ ತಮ್ಮನ್ನು ತಾವು ಸಮರ್ಪಣೆ ಮಾಡಿಕೊಂಡಿರುವ ಎಸ್.ಕರಿಯಪ್ಪ ಅವರ 126ನೇ ಜನ್ಮದಿನೋತ್ಸವ ಹಾಗೂ 46ನೇ ಪುಣ್ಯಸ್ಮರಣೆ ಮಾರ್ಚ್ 27 ಶುಕ್ರವಾರ ಸಂಸ್ಥೆ ವತಿಯಿಂದ ಆಚರಣೆ ಮಾಡಲಾಗುತ್ತಿದೆ ಎಂದು ಆರ್ಇಎಸ್ ಅಧ್ಯಕ್ಷ ಎಚ್.ಕೆ.ಶ್ರೀಕಂಠ ತಿಳಿಸಿದರು.

ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಕರಿಯಪ್ಪ ಅವರು ವಿದ್ಯಾ ಸಂಸ್ಥೆ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಆದರ್ಶ, ನೆನಪು, ಜೀವನದ ಧ್ಯೇಯಗಳನ್ನು ಸಾರ್ವಜನಿಕವಾಗಿ ತಿಳಿಸಿಕೊಡಲು ಜಯಂತಿ ಹಮ್ಮಿಕೊಳ್ಳಲಾಗಿದೆ ಎಂದರು.

ಅವರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿಟ್ಟು ಮೆರವಣಿಗೆ ನಡೆಸಲಾಗುವುದು. ಸಾಂಸ್ಕೃತಿಕ ಕಲಾತಂಡಗಳು, ಶಾಲಾ ಮಕ್ಕಳು, ಕರಿಯಪ್ಪ ಅವರ ಅಭಿಮಾನಿಗಳು, ನಾಗರಿಕರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಮೆರವಣಿಗೆ ನಂತರ ಆರ್ಇಎಸ್ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿಜಿಆರ್ ಸಿಂಧ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.

ಸುವರ್ಣಮುಖಿ ಸಂಸ್ಕೃತಿ ಧಾಮದ ಸಂಸ್ಥಾಪಕ ಅಧ್ಯಕ್ಷ ಆಚಾರ್ಯ ಡಾ.ಎಂ.ನಾಗರಾಜು ಹಾಗೂ ಟ್ರಾನ್ಸ್ ಗ್ಲೋಬಲ್ ಪವರ್ ಲಿಮಿಟೆಡ್ ಬೆಂಗಳೂರು ಸುರೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಕರಿಯಪ್ಪ ಅವರ ಜಯಂತಿಯನ್ನು ಕಾಲೇಜು ಆವರಣಕ್ಕೆ ಸೀಮಿತಗೊಳಿಸದೆ ತಾಲ್ಲೂಕು ಹಾಗೂ ನಗರದ ಜನರಿಗೆ ತಿಳಿಸುವ ಉದ್ದೇಶದಿಂದ ಸಾರ್ವಜನಿಕವಾಗಿ ಆಚರಿಸಲಾಗುವುದು ಎಂದರು.

ಸಂಸ್ಥೆ ಕಾರ್ಯದರ್ಶಿ ಪುಟ್ಟಸ್ವಾಮಿ, ಖಜಾಂಚಿ ಮಂಜುನಾಥ್, ಪ್ರಾಂಶುಪಾಲ ಕೆಂಪೇಗೌಡ, ಉಪ ಪ್ರಾಂಶುಪಾಲ ಅಪ್ಪಾಜಿ, ನಿವೃತ್ತ ಉಪ ಪ್ರಾಂಶುಪಾಲ ದೇವರಾಜು ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-14-710267828

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.