ಕನಕಪುರ: ಪ್ರವಾಸಿ ತಾಣ ಸಂಗಮದಲ್ಲಿ ಒಂಟಿ ಕಾಡಾನೆಯೊಂದು ದಿಢೀರ್ ನುಗ್ಗಿ ದಾಳಿ ನಡೆಸಿದ ಪರಿಣಾಮ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಗುರುವಾರ ನಡೆದಿದೆ.

ತಾಲ್ಲೂಕಿನ ಸಂಗಮದ ಕಾವೇರಿ ನದಿ ತೀರದಲ್ಲಿ ಪ್ರವಾಸಿಗರು ನೀರಿನಲ್ಲಿ ಆಟವಾಡುತ್ತಿದ್ದಾಗ ಒಂಟಿ ಕಾಡಾನೆ ನುಗ್ಗಿ ಬಂದಿದೆ. ಆನೆಯನ್ನು ಕಂಡ ಪ್ರವಾಸಿಗರು ದಿಕ್ಕಾಪಾಲಾಗಿ ಓಡಿದರು.

ಬೇಸಿಗೆ ರಜೆ ಆರಂಭವಾಗಿರುವುದರಿಂದ ಸಂಗಮಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ನದಿಯಲ್ಲಿ ಪ್ರವಾಸಿಗರು ಆಟವಾಡುತ್ತಿದ್ದ ವೇಳೆ ನೀರು ಕುಡಿಯಲು ಬಂದ ಕಾಡಾನೆ ಅಲ್ಲಿಗೆ ನುಗ್ಗಿದೆ. ಇದರಿಂದ ಪುರುಷರು, ಮಹಿಳೆಯರು, ಮಕ್ಕಳು ಭಯಭೀತರಾದರು.

ಪ್ರವಾಸಿಗರು ಕೂಗಾಡುತ್ತಿದ್ದಂತೆ ಅಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಯನ್ನು ಓಡಿಸಿದರು. ಆನೆ ಯಾರ ಮೇಲೂ ದಾಳಿ ಮಾಡಿಲ್ಲ. ಈ ದೃಶ್ಯವನ್ನು ಕೆಲವರು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ವಿಡಿಯೊ ವೈರಲ್ ಆಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-14-348296791

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.