ಕನಕಪುರ: ಬುದ್ಧಿಮಾಂದ್ಯ ಯುವತಿಗೆ ವಾಟ್ಸ್ ಆ್ಯಪ್ ಮೂಲಕ ಅಶ್ಲೀಲ ಸಂದೇಶ ಮತ್ತು ವಿಡಿಯೊ ಕಳುಹಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮುದ್ದನಗಟ್ಟಿ ಗ್ರಾಮದ ರಮೇಶ್ (33) ಬಂಧಿತ ಆರೋಪಿ. ಈತ ಮಧ್ಯರಾತ್ರಿ ಯುವತಿಯ ಮೊಬೈಲ್ಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡುತ್ತಿದ್ದ. ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬುದ್ಧಿಮಾಂದ್ಯ ಯುವತಿಗೆ ಮೊದಲು ಪರಿಚಯವಾಗಿದ್ದ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕುರುಬರದೊಡ್ಡಿ ಗ್ರಾಮದ ಮಂಜುನಾಥ್ ಎಂಬಾತ ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ ₹3.65 ಲಕ್ಷ ಹಣ ಪಡೆದು ವಂಚಿಸಿದ್ದ.

ಯುವತಿ ಹಣ ವಾಪಸ್ ಕೊಡುವಂತೆ ಮಂಜುನಾಥ್ ಬೆನ್ನು ಬಿದ್ದಿದ್ದಳು. ಆಗ ಆತ ರಮೇಶ ಎಂಬಾತನಿಗೆ ಯುವತಿಯ ಮೊಬೈಲ್ ನಂಬರ್ ಕೊಟ್ಟು ಕಿರುಕುಳ ನೀಡಿ ಬೆದರಿಕೆ ಹಾಕುವಂತೆ ಸೂಚಿಸಿದ್ದ ಎನ್ನಲಾಗಿದೆ.

ಇಬ್ಬರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮತ್ತೊಬ್ಬ ಆರೋಪಿ ಮಂಜುನಾಥನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-18-911209326

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.