ಕನಕಪುರ: ಸ್ಲಂ ಬೋರ್ಡ್ ವತಿಯಿಂದ ನಗರದಲ್ಲಿ ನಿರ್ಮಾಣ ಮಾಡುತ್ತಿರುವ ಮನೆಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಆರೋಪ ಮಾಡಿದ ನಗರಸಭೆ ಸದಸ್ಯರು ತನಿಖೆ ನಡೆಸುವಂತೆ ಪಟ್ಟು ಹಿಡಿದರು.

ಸ್ಲಂ ಬೋರ್ಡ್ನಿಂದ ನಗರದಲ್ಲಿ ನಿರ್ಮಾಣ ಮಾಡಿರುವ ಮನೆಗಳನ್ನು ಬಡವರಿಗೆ ಹಂಚಿಕೆ ಮಾಡಿಲ್ಲ. ನಗರಸಭೆ ಮಾಜಿ ಸದಸ್ಯರಿಗೆ ಹತ್ತು ಮನೆ ನಿರ್ಮಾಣ ಮಾಡಿ ಕೊಡಲಾಗುತ್ತಿದೆ. ಬಡವರ ಸೌಲಭ್ಯಗಳು ಉಳ್ಳವರ ಪಾಲಾಗುತ್ತಿವೆ ಎಂದು ಸದಸ್ಯರು ದೂರಿದರು.

ನಗರಸಭೆ ಅಧ್ಯಕ್ಷ ಹೇಮಾರಾಜು ಅವರು ಅಧಿಕಾರಿಗಳ ಜೊತೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಬೇಕು. ಆರೋಪ ಸಾಬೀತಾದಲ್ಲಿ ದುರ್ಬಳಕೆ ಮಾಡಿಕೊಂಡವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಸದಸ್ಯರ ಒತ್ತಡಕ್ಕೆ ಮಣಿದು ಮನೆ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಆರೋಪಗಳ ಬಗ್ಗೆ ತನಿಖೆ ನಡೆಸಲು ಸಭೆಯಲ್ಲಿ ನಿರ್ಣಯಿಸಲಾಯಿತು.

ನಗರಸಭೆ ವ್ಯಾಪ್ತಿಯ ಕುರುಪೇಟೆಯಲ್ಲಿ ನಿರ್ಮಾಣ ಹಂತದಲ್ಲಿ ಮನೆಗಳಿದ್ದು ಯಾರಿಗೆ ಹಂಚಿಕೆ ಮಾಡಿದ್ದಾರೆ ಎದ್ದು ಗೊತ್ತಿಲ್ಲ. ಮನೆಗಳು ಸಿಗದ ಬಡವರು ಮನೆಗಳಿಗಾಗಿ ಪರದಾಡುತ್ತಿದ್ದಾರೆ. ಆದರೆ, ನಗರಸಭೆಯ ಮಾಜಿ ಸದಸ್ಯರಿಗೆ ಹತ್ತು ಮನೆ ನಿರ್ಮಾಣ ಮಾಡಿ ಕೊಡಲಾಗುತ್ತಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಜೆಡಿಎಸ್ ಸದಸ್ಯ ಲೋಕೇಶ್ ಚರ್ಚೆಗೆ ನಾಂದಿ ಹಾಡಿದರು.

ವಸತಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಪ್ರಶ್ನಿಸಬೇಕು ಎಂದರೆ ಸಭೆಗೆ ಆಹ್ವಾನವಿಲ್ಲ. ಯಾರನ್ನು ಕೇಳಬೇಕು ಎಂದು ಪ್ರಶ್ನಿಸಿದರು. ಅವರ ಆರೋಪಕ್ಕೆ ಉಳಿದ ಸದಸ್ಯರು ಧ್ವನಿಗೂಡಿಸಿದರು.

ಹಲವಾರು ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಈ ಬಗ್ಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಭೆಯಲ್ಲಿ ನಿರ್ಧಾರ ಮಾಡಲಾಯಿತು. ಅಗತ್ಯವಿರುವ ಕಡೆ ಕೊಳವೆಬಾವಿ ಕೊರಿಸಲು ತೀರ್ಮಾನಿಸಲಾಯಿತು. ನಗರದಲ್ಲಿ ಬೀದಿದೀಪ ವ್ಯವಸ್ಥೆ ಸರಿಪಡಿಸಲು ಸೂಚಿಸಲಾಯಿತು.

ನಗರಸಭೆ ವ್ಯಾಪ್ತಿಯಲ್ಲಿ ಪಡಿತರ ಇಲಾಖೆಯಲ್ಲಿ ಆಗುತ್ತಿರುವ ಸಮಸ್ಯೆ, ಜನನ ಮತ್ತು ಮರಣ ನೋಂದಣಿ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಇಲ್ಲಿ ನ್ಯಾಯಾಲಯದ ಆದೇಶಕ್ಕೂ ಕಿಮ್ಮತ್ತಿಲ್ಲ ಎಂದು ಸದಸ್ಯರು ಬೇಸರ ವ್ಯಕ್ತಪಡಿಸಿದರು.

ನ್ಯಾಯಾಲಯದ ಆದೇಶ ಉಲ್ಲಂಘಿಸುವಂತಿಲ್ಲ. ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಯುಕ್ತ ಎಂ.ಎಸ್. ಮಹದೇವ್ ಹೇಳಿದರು.

ನಗರದಲ್ಲಿ ಕಾವೇರಿ ನೀರು ಪೂರೈಕೆಗೆ 266 ಕಿ.ಮೀ ಉದ್ದದ ಹೊಸ ಪೈಪ್ಲೈನ್ಗೆ ಹೆಚ್ಚುವರಿಯಾಗಿ ₹20 ಕೋಟಿ ವೆಚ್ಚವಾಗಲಿದೆ. ಕಾನೂನು ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ಕೊಳಾಯಿ ಸಂಪರ್ಕ ನೀಡದಂತೆ ಸುಪ್ರಿಂ ಕೋರ್ಟ್ ನಿರ್ದೇಶನ ನೀಡಿದೆ. ಅದನ್ನು ಪಾಲಿಸಬೇಕು. ಎನ್ಒಸಿ ನೀಡಲು ಹಿಂದೆ ಇದ್ದ ದರಕ್ಕೆ ಮಾರ್ಪಾಡು ಮಾಡಲು ಸಭೆಯಲ್ಲಿ ಒಪ್ಪಿಗೆ ಪಡೆಯಲಾಯಿತು. ಉಪಾಧ್ಯಕ್ಷ ಸಯ್ಯದ್ ಸಾದಿಕ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.