ಕನಕಪುರ: ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಅಶೋಕ್ (40) ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ಅಶೋಕ್ ಆತ್ಮಹತ್ಯೆ ಮಾಡಿಕೊಂಡಿದ್ದು, ಬಾಗಿಲು ತೆಗೆಯದೆ ರೂಮಿನಿಂದ ವಾಸನೆ ಬರುತ್ತಿದ್ದಾಗ ಅನುಮಾನಗೊಂಡು ಬಾಗಿಲು ಹೊಡೆದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಅಶೋಕ್ ಐದು ವರ್ಷಗಳಿಂದ ಸಾತನೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಡಾಬಾವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಇವರು ಯಾವ ಊರಿನವರು ಎಂಬುದು ತಿಳಿದುಬಂದಿಲ್ಲ. ಹಾಗಾಗಿ ಸಾತನೂರು ಪೊಲೀಸರು ಈ ಆತ್ಮಹತ್ಯೆಯನ್ನು ಅಸಹಜ ಸಾವು (ಯುಡಿಆರ್) ಎಂದು ದಾಖಲಿಸಿ ಮೃತ ದೇಹವನ್ನು ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಇಡಲಾಗಿದೆ.

ಮೃತ ವ್ಯಕ್ತಿಗೆ ವಾರಸುದಾರರು ಇದ್ದರೆ ಸಾತನೂರು ಪೊಲೀಸರನ್ನು 9480802863 ಸಂಪರ್ಕಿಸಿ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.