ಕನಕಪುರ: ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೊಂಚು ಹಾಕಿ ಕಾಯುತ್ತಿದ್ದಾಗ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದು, ಒಬ್ಬ ಪರಾರಿಯಾಗಿದ್ದಾನೆ.

ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಆಲ್ಕುಳಿ ಗ್ರಾಮದ ಶಿವಸ್ವಾಮಿ, ಪ್ರದೀಪ್ ಕುಮಾರ್ ಮತ್ತು ಜಗದೀಶ್ ಬಂಧಿತ ಆರೋಪಿಗಳಾಗಿದ್ದಾರೆ. ತಲೆಮರಸಿಕೊಂಡಿರುವ ಆರೋಪಿ, ಆಲ್ಕುಳಿ ಮಹದೇವನಾಯ್ಕನಿಗಾಗಿ ಶೋಧಕಾರ್ಯ ಕೈಗೊಂಡಿದ್ದಾರೆ.

ಶನಿವಾರ ಮುಂಜಾನೆ ಮುಗ್ಗೂರು ವನ್ಯಜೀವಿ ವಲಯದ ಆಲ್ಕುಳಿ ಗಸ್ತಿನ ವ್ಯಾಪ್ತಿಗೆ ಬರುವ ಜಮೀನೀನಲ್ಲಿ ನಾಡಬಂದೂಕಿನಿಂದ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮುಗ್ಗೂರು ಆರ್ಎಫ್ಒ ರಾಜೇಂದ್ರ ಸ್ವಾಮಿ, ಡಿಆರ್ಎಫ್ಒ ಸುನಿಲ್, ಬೀಟ್ ಫಾರೆಸ್ಟ್ ಶಿವು ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ದಾಳಿ ಸಂದರ್ಭದಲ್ಲಿ ಮೂವರು ಆರೋಪಿಗಳು ಹಾಗೂ ಒಂದು ನಾಡ ಬಂದೂಕು ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ನಾಡ ಬಂದೂಕು ಬಳಕೆ ಮಾಡಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣವನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಿ ಆರೋಪಿಗಳನ್ನು ಕೋಡಿಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-14-167317002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.