ಕನಕಪುರ: ತಾಲ್ಲೂಕಿನ ಗಡಿಭಾಗ ಭೀಮಗೊಂಡನಹಳ್ಳಿ ಬಳಿಯ ಮೊಬ್ಬಿನ ದೊಡ್ಡಿಯಲ್ಲಿ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಕೆರೆ ಮೇಗಳದೊಡ್ಡಿ ಗ್ರಾಮದ ಶಂಕರ್ ನಾಯಕ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ.

ಬೆಂಗಳೂರಿನಲ್ಲಿ ಕಾರು ಚಾಲಕನಾಗಿದ್ದ ಶಂಕರ ನಾಯಕ್ ಹಾಗೂ ಬೆಂಗಳೂರಿನಲ್ಲಿದ್ದ ಉಯ್ಯಂಬಳ್ಳಿ ಹೋಬಳಿ ಬೆಂಡಗೋಡು ಗ್ರಾಮದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆಗಾಗ ಇಬ್ಬರೂ ಜಗಳವಾಡುತ್ತಿದ್ದರು.

ಯುವತಿಯ ಹಿಂಸೆ ತಾಳದೆ ನನ್ನ ಮಗ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಮಗನ ಸಾವಿಗೆ ಯುವತಿಯೇ ಕಾರಣ. ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯುವಕನ ತಂದೆ ಗೋಪಿ ನಾಯಕ್ ಕೋಡಿಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಕೋಡಿಹಳ್ಳಿ ಪೊಲೀಸರು ಯುವತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-14-587427750

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.