ರಾಮನಗರ: ಕನಕಪುರ ನಗರದ ಬೈಪಾಸ್ ರಸ್ತೆ ಬಳಿ ಶುಕ್ರವಾರ ಯುವಕನೊಬ್ಬ 17 ವರ್ಷದ ವಿದ್ಯಾರ್ಥಿನಿ ಮುಖದ ಮೇಲೆ ಆ್ಯಸಿಡ್ ಎರಚಿದ್ದಾನೆ.
ದಾಳಿಯಲ್ಲಿ ಬಾಲಕಿಯ ಎಡಗಣ್ಣಿಗೆ ಗಾಯಗಳಾಗಿದ್ದು, ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.
22 ವಯಸ್ಸಿನ ಆರೋಪಿ ಯುವಕ ಕುರುಪೇಟೆಯಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ. ಈತ ಮತ್ತು ವಿದ್ಯಾರ್ಥಿನಿ ನಡುವೆ ಕಳೆದ ಒಂದು ವರ್ಷದಿಂದಲೂ ಸಲುಗೆ ಇತ್ತು. ಈಚೆಗೆ ಇಬ್ಬರ ನಡುವೆ ಗಲಾಟೆ ನಡೆದಿದ್ದು, ವಿದ್ಯಾರ್ಥಿನಿ ಯುವಕನ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ.
ಬೈಪಾಸ್ ರಸ್ತೆಯಲ್ಲಿ ಯುವಕ ವಿದ್ಯಾರ್ಥಿನಿಯ ಮನವೊಲಿಸಲು ಯತ್ನಿಸಿದ್ದಾನೆ. ಆಕೆ ಒಪ್ಪದಿದ್ದಾಗ ಕಾರ್ ಎಂಜಿನ್ ಶುಚಿಗೊಳಿಸಲು ಬಳಸುತ್ತಿದ್ದ ಆ್ಯಸಿಡ್ ಅನ್ನು ಎರಚಿದ್ದಾನೆ ಎನ್ನಲಾಗಿದೆ. ಕನಕಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.