ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕನಕಪುರ | ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ

Published 14 ಆಗಸ್ಟ್ 2024, 14:20 IST
Last Updated 14 ಆಗಸ್ಟ್ 2024, 14:20 IST
ಅಕ್ಷರ ಗಾತ್ರ

ಕನಕಪುರ: ಬಾಂಗ್ಲಾ ಹಿಂದೂಗಳ ಮೇಲೆ ನಿರಂತರ ಹಲ್ಲೆ ನಡೆಯುತ್ತಿದೆ. ಈ ಮಾನವ ನರಮೇದವನ್ನು ಕೂಡಲೇ ತಡೆಯಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.

ನಗರದ ಚನ್ನಬಸಪ್ಪ ವೃತ್ತದಲ್ಲಿ ಮಂಗಳವಾರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ ನಂತರ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.

‘ಬಾಂಗ್ಲಾ ದೇಶ ಭಾರತದ ಒಂದು ಅಂಗವಾಗಿತ್ತು, ಅಲ್ಲಿರುವ ಹಿಂದೂಗಳು ಅಲ್ಲಿನ ಮೂಲ ನಿವಾಸಿಗಳೇ ಆಗಿದ್ದಾರೆ. ಸಲಾತಿ ದಂಗೆಯಲ್ಲಿ ಬಾಂಗ್ಲಾ ಹಿಂದೂಗಳನ್ನು ಮಾತ್ರ ಗುರಿಯಾಗಿಸಿ ಹತ್ಯೆ ಮಾಡುತ್ತಿರುವುದು ಆತಂಕಕಾರಿ. ಕೂಡಲೆ ಕೇಂದ್ರ ಸರ್ಕಾರ ಇದನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಿ ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಂತರ ತಾಲ್ಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ಮನವಿ ಪತ್ರವನ್ನು ರಾಷ್ಟ್ರಪತಿಗಳಿಗೆ ಮತ್ತು ಕೇಂದ್ರದ ಗೃಹ ಇಲಾಖೆಗೆ ಸಲ್ಲಿಸಿದರು. ಹಿಂದೂ ಜಾಗರಣಾ ವೇದಿಕೆಯ ವೆಂಕಟೇಶ್, ಮಂಜುನಾಥ್, ಕೃಷ್ಣಪ್ಪ, ರಾಜು, ಜೀತೇಂದ್ರಕುಮಾರ್, ನಟೇಶ್, ಆಟೋ ಡ್ರೈವರ್ ಕುಮಾರ್, ಕೀರ್ತಿರಾಜ್, ಚಿಕ್ಕಣ್ಣ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT