ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕನಕಪುರ: ಮತದಾನ ಜಾಗೃತಿ ಜಾಥಾ

Published 2 ಏಪ್ರಿಲ್ 2024, 5:30 IST
Last Updated 2 ಏಪ್ರಿಲ್ 2024, 5:30 IST
ಅಕ್ಷರ ಗಾತ್ರ

ಕನಕಪುರ: ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನ ಮಾಡುವ ಮೂಲಕ ‌‌‌ಹಕ್ಕು ಚಲಾಯಿಸಬೇಕು ಎಂದು ಸಹಾಯಕ ಚುನಾವಣಾ ಅಧಿಕಾರಿ ರಾಘವೇಂದ್ರ ಟಿ.ಆರ್‌ ಮನವಿ ಮಾಡಿದರು.

ನಗರದಲ್ಲಿ ಸೋಮವಾರ ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್‌ ಸಮಿತಿ ಹಾಗೂ ತಾಲ್ಲೂಕು ಪಂಚಾಯಿತಿ ಆಶ್ರಯದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚುನಾವಣೆಯಲ್ಲಿ ಯಾವುದೇ ರೀತಿ ಲೋಪವಾಗದಂತೆ ಎಲ್ಲ ರೀತಿಯ ವ್ಯವಸ್ಥೆಯನ್ನು ಚುನಾವಣಾ ಆಯೋಗ ಮಾಡಿದೆ. ಚುನಾವಣೆ ಅಕ್ರಮ ತಡೆಗಟ್ಟಿ ಪಾರದರ್ಶಕವಾಗಿ ಚುನಾವಣೆ ನಡೆಸಲು ಮಾದರಿ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಕನಕಪುರ ವಿಧಾನಸಭೆ ಕ್ಷೇತ್ರದಲ್ಲಿ 297 ಮತಗಟ್ಟೆಗಳಿವೆ. 2,27,000 ಮತದಾರರಿದ್ದಾರೆ. ಏಪ್ರಿಲ್‌ 26 ರಂದು ನಡೆಯುವ ಮತದಾನದಲ್ಲಿ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲು ಎಲ್ಲರೂ ಮುಕ್ತವಾಗಿ ಮತದಾನ ಮಾಡಬೇಕೆಂದು ಮನವಿ ಮಾಡಿದರು.

ತಹಶೀಲ್ದಾರ್‌ ಡಾ.ಸ್ಮಿತಾರಾಮ್‌, ತಾಲ್ಲೂಕು ಪಂಚಾಯ್ತಿ ಇ.ಒ ಮೋಹನ್‌ಬಾಬು, ನಗರಸಭೆ ಪೌರಾಯಕ್ತ ಎಂ.ಎಸ್‌.ಮಹದೇವ್‌, ಪಿಡಿಒ ಸೇರಿದಂತೆ ತಾಲ್ಲೂಕು ಕಚೇರಿ, ತಾಲ್ಲೂಕು ಪಂಚಾಯಿತಿ ಮತ್ತು ನಗರಸಭೆ ನೌಕರರು, ಸಿಬ್ಬಂದಿ, ಕಾಲೇಜ ವಿದ್ಯಾರ್ಥಿಗಳು ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಲ್ಲೂಕು ಕಚೇರಿಯಿಂದ ಮತದಾನ ಜಾಗೃತಿ ಜಾಥಾ ಹೊರಟು ನಗರದ ಎಂ.ಜಿ.ರಸ್ತೆ, ಬಸ್‌ ನಿಲ್ದಾಣದಲ್ಲಿ ಸಂಚರಿಸಿತು.

ಚನ್ನಬಸಪ್ಪ ವೃತ್ತದಲ್ಲಿ ಮೇಣದ ಬತ್ತಿ ಹಚ್ಚಿ ಮತದಾನ ಜಾಗೃತಿಯ ಘೋ‍ಷಣೆಗಳನ್ನು ಕೂಗಿದರು
ಚನ್ನಬಸಪ್ಪ ವೃತ್ತದಲ್ಲಿ ಮೇಣದ ಬತ್ತಿ ಹಚ್ಚಿ ಮತದಾನ ಜಾಗೃತಿಯ ಘೋ‍ಷಣೆಗಳನ್ನು ಕೂಗಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT