ರಾಮನಗರ: ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಇಂಗ್ಲಿಷ್ ಮತ್ತು ಹಿಂದಿ ಭಾಷೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಕನ್ನಡ ಕಡೆಗಣಿಸುತ್ತಿವೆ ಎಂದು ಆರೋಪಿಸಿ, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ಕುಮಾರ್ ಶೆಟ್ಟಿ ಬಣ) ಪದಾಧಿಕಾರಿಗಳು ನಗರದ ಶಾಲಾ ಶಿಕ್ಷಣ ಇಲಾಖೆ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.

ಶಾಲೆಗಳಲ್ಲಿ ನಡೆಯುವ ವಾರ್ಷಿಕೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಫ್ಲೆಕ್ಸ್ ಮತ್ತು ಬ್ಯಾನರ್ಗಳಲ್ಲಿ ಕನ್ನಡ ಮಾಯವಾಗಿದೆ. , ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಕನ್ನಡ ಹಾಡುಗಳು ಕೇಳುತ್ತಿಲ್ಲ. ಖಾಸಗಿ ಶಾಲೆಗಳಲ್ಲಿ ಕನ್ನಡದ ವಾತಾವರಣವೇ ಇಲ್ಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾವು ಇಂಗ್ಲಿಷ್ ವಿರೋಧಿಗಳಲ್ಲ. ಆದರೆ, ಕನ್ನಡ ಭಾಷೆಯನ್ನು ಕಡೆಗಣಿಸುವುದನ್ನು ನಾವು ಸಹಿಸುವುದಿಲ್ಲ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದೆ. ಹಾಗಾಗಿ, ನಮ್ಮ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹಾಗಾಗಿ, ಕನ್ನಡ ವಿರೋಧಿ ಭಾವನೆಯನ್ನು ಬಿಡಬೇಕು ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಎಂ.ಎನ್.ಆರ್. ರಾಜು ಆಗ್ರಹಿಸಿದರು.

ಶಾಲೆಗಳಲ್ಲಿ ಕನ್ನಡ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಶಾಲೆಗಲ್ಲಿ ಮಕ್ಕಳು ಕನ್ನಡದ ಗಂಧ–ಗಾಳಿ ಇಲ್ಲದೆ ಬೆಳೆಯುವಂತಹ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಶಾಲೆ ನಡೆಸಲು ಮಂಡಳಿಗೆ ಕನ್ನಡಿಗರ ಹಣ ಬೇಕು. ಆದರೆ, ಅವರಿಗೆ ಕನ್ನಡ ಮಾತ್ರ ಬೇಡ ಎಂಬ ಧೋರಣೆ ಬಿಡಬೇಕು. ಇಲ್ಲದಿದ್ದರೆ ಶಾಲೆಗಳ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಳಿಕ ಇಲಾಖೆಯ ಅಧಿಕಾರಿಗಳಿಗೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ವೇದಿಕೆಯ ಆರ್.ಬಿ.ಎಲ್. ಲೋಕೇಶ್, ನಾಗರಾಜು, ಪ್ರಸನ್ನ, ಪ್ರವೀಣ್ ಕುಮಾರ್ ಎಸ್, ನವೀನ್ ಕುಮಾರ್ ಕಿರಣ್ ,ಅಜಯ್, ಮಂಚೇಗೌಡ, ಶಿವರಾಜ್, ವಿನೋದ್, ಪುಟ್ಟರಾಜು, ಪ್ರದೀಪ್ ಸಿ.ಆರ್, ಶಶಿಕುಮಾರ್, ಎಸ್ ಎಸ್ ಡಿ ಸುರೇಶ್, ಶಿವರಾಜು , ಚೇತನ್ ಕುಮಾರ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.