ಬುಧವಾರ, ಜನವರಿ 19, 2022
26 °C

ಕಸಾಪ‌ ಚುನಾವಣೆ: ರಾಮನಗರ ಜಿಲ್ಲೆಯಲ್ಲಿ ಮತದಾನ‌ ಚುರುಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಹಾಗೂ ಜಿಲ್ಲಾ ಅಧ್ಯಕ್ಷ ಚುನಾವಣೆಯ ಮತದಾನ ಪ್ರಕ್ರಿಯೆಯು ಜಿಲ್ಲೆಯಾದ್ಯಂತ ಚುರುಕಾಗಿ ನಡೆದಿದೆ.

ರಾಮನಗರದ ತಾಲ್ಲೂಕು ಕಚೇರಿಯಲ್ಲಿನ ಎರಡು ಮತಗಟ್ಟೆ ಸೇರಿದಂತೆ ಜಿಲ್ಲೆಯಾದ್ಯಂತ ಹತ್ತು ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಸಾಹಿತ್ಯಾಸಕ್ತರು ಮತದಾನಕ್ಕೆ  ಉತ್ಸಾಹ ತೋರಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 9680 ಮತದಾರರು ಇದ್ದಾರೆ. ಇದರಲ್ಲಿ ಚನ್ನಪಟ್ಟಣ ತಾಲ್ಲೂಕು ಒಂದರಲ್ಲಿಯೇ 4342 ಮತದಾರರು ಇದ್ದಾರೆ. ಕಸಾಪ ರಾಮನಗರ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಬಿ.ಟಿ. ನಾಗೇಶ, ಯೋಗೀಶ ಚಕ್ಕೆರೆ, ಪಾರ್ವತೀಶ ಬಿಳಿದಾಳೆ, ವಿ. ಸಂದೇಶ, ಡಿ. ಕೃಷ್ಣಮೂರ್ತಿ ಸೇರಿದಂತೆ ಐವರು ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.

 ಸಂಜೆ 4ರವರೆಗೆ ಮತದಾನಕ್ಕೆ ಅವಕಾಶ ಇದೆ. ನಂತರ ಮತಗಟ್ಟೆಗಳಲ್ಲೇ ಎಣಿಕೆ ಕಾರ್ಯ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು