ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಕಸಾಪಕ್ಕೆ ನಿವೇಶನ ಮರೀಚಿಕೆ: ಸಾಹಿತಿ ಪ್ರೊ.ಎಂ. ಶಿವನಂಜಯ್ಯ

Last Updated 2 ನವೆಂಬರ್ 2020, 2:23 IST
ಅಕ್ಷರ ಗಾತ್ರ

ರಾಮನಗರ: ‘ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ ಪಡೆಯಲು ಜಿಲ್ಲಾ ಕೇಂದ್ರದಲ್ಲಿ ಸಾಹಿತ್ಯ ಸಂಘಟಕರು ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ’ ಎಂದು ಸಾಹಿತಿ ಪ್ರೊ.ಎಂ. ಶಿವನಂಜಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಐಜೂರು ವೃತ್ತದಲ್ಲಿ ಭಾನುವಾರ ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಸ್ನೇಹಕೂಟ ಟ್ರಸ್ಟ್‌ನಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ
ಅವರು ಮಾತನಾಡಿದರು.

ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಅಗ್ರಮಾನ್ಯ. ಆದರೆ, ಚುನಾಯಿತ
ಪ್ರತಿನಿಧಿಗಳಲ್ಲಿ ಭಾಷೆಯ ಉಳಿವಿನ ಬಗ್ಗೆ ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ. ಜಿಲ್ಲಾಮಟ್ಟದ ಅಧಿಕಾರಿಗಳಲ್ಲೂ ಆಸಕ್ತಿ ಕಡಿಮೆಯಿದೆ. ಜಿಲ್ಲಾ ಕೇಂದ್ರದಲ್ಲಿ ಕಸಾಪಗೆ ನಿವೇಶನ ನೀಡಲು ಜಿಲ್ಲಾಡಳಿತದಿಂದ ಸಾಧ್ಯವಾಗದಿರುವುದೇ ಇದಕ್ಕೆ ಸಾಕ್ಷಿ. ಈ ಬಗ್ಗೆ ಅನೇಕ ಬಾರಿ ಮನವಿ ನೀಡಿದ್ದರೂ ಪ್ರಯೋಜವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ಸಿಂ.ಲಿಂ. ನಾಗರಾಜು ಮಾತನಾಡಿ, ಜಿಲ್ಲಾ ಕಸಾಪಗೆ ನಿವೇಶನ ನೀಡುವಂತೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು
ಹೇಳಿದರು.

ಧ್ವಜಾರೋಹಣ ಸಂದರ್ಭದಲ್ಲಿ ಸ್ನೇಹಕೂಟ ಟ್ರಸ್ಟ್‌ ಅಧ್ಯಕ್ಷ ಎಚ್.ಪಿ. ನಂಜೇಗೌಡ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಎಚ್.ಎಸ್. ರೂಪೇಶ್‌ ಕುಮಾರ್‌, ತಾಲ್ಲೂಕು ಅಧ್ಯಕ್ಷರಾದ ಬಿ.ಟಿ. ದಿನೇಶ್, ಮತ್ತೀಕೆರೆ ಚೆಲುವರಾಜು, ನಿವೃತ್ತ ಪ್ರಾಂಶುಪಾಲ ಎಲ್.ಎನ್. ವನರಾಜು, ಸ್ನೇಹಕೂಟ ಟ್ರಸ್ಟ್ ಗೌರವಾಧ್ಯಕ್ಷ ದೇವರಾಜು, ಪ್ರಧಾನ ಕಾರ್ಯದರ್ಶಿ ಪಿ.ಎಸ್. ರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT