ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೂ ಆದ್ಯತೆ ಸಿಗಲಿ

ಬಿಡದಿ: ಇಲ್ಲಿನ ತಿಮ್ಮಪ್ಪನಕೆರೆ ಆಟದ ಮೈದಾನದಲ್ಲಿ ಭಾನುವಾರ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಬಿಡದಿ ಕನ್ನಡ ನುಡಿ ಜಾತ್ರೆ ಕಾರ್ಯಕ್ರಮ ನಡೆಯಿತು.
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ್‍ಕುಮಾರ್ ಶೆಟ್ಟಿ ಮಾತನಾಡಿ, ‘ಬೆಳಗಾವಿ ಗಡಿ ವಿವಾದದ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ರಾಜಕಾರಣಿಗಳಿಗೆ ನಮ್ಮ ರಾಜಕಾರಣಿಗಳು ಪ್ರತ್ಯುತ್ತರ ನೀಡಬೇಕು’ ಎಂದು ಹೇಳಿದರು.
ನಮಗೆ ಕನ್ನಡವೇ ಜಾತಿ, ಧರ್ಮವಾಗಿದ್ದು, ಇದೇ ಧ್ಯೇಯದೊಂದಿಗೆ ರಾಜ್ಯದೆಲ್ಲೆಡೆ ಕನ್ನಡಪರ ಹೋರಾಟ ನಡೆಸಲಾಗುತ್ತಿದೆ. ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ ಹಲವು ಐಟಿ, ಬಿಟಿ, ಬೃಹತ್ ಕೈಗಾರಿಕೆಗಳಿಗೆ ಅವಕಾಶ ನೀಡಿ ಮೂಲ ಸೌಕರ್ಯ ಕಲ್ಪಿಸುತ್ತಿದೆ. ಇಂಥ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು. ಸರೋಜಿನಿ ಮಹಿಷಿ ವರದಿಯ ಆಧಾರದ ಮೇಲೆ ಈ ನೆಲದ ಮಕ್ಕಳಿಗೆ ಕೆಲಸ ಕೊಡಬೇಕು ಎಂದು ಒತ್ತಾಯಿಸಿದರು.
ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಮಾತನಾಡಿ, ಕನ್ನಡ ನಾಡನ್ನು ಕಟ್ಟಿದ ಹಲವು ಮಹನೀಯರು, ಹೋರಾಟಗಾರರು, ಸಾಹಿತಿಗಳು, ಕವಿಗಳನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.
ಹಿಂದೆ ಬೆಂಗಳೂರು ನಗರವನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕೆಂದು ಐಟಿಬಿಟಿ ಕಂಪನಿಗಳು ಕೇಂದ್ರಕ್ಕೆ ಮನವಿ ಸಲ್ಲಿಸಿದ್ದವು. ಇದನ್ನು ನಮ್ಮ ಸಂಘಟನೆ ವಿರೋಧಿಸಿತ್ತು. ನಮ್ಮ ಹೋರಾಟದ ಫಲವಾಗಿ ಇಂದು ಕನ್ನಡಿಗರು ಕನ್ನಡ ಭಾಷೆಯಲ್ಲೇ ರೈಲ್ವೆ ಪರೀಕ್ಷೆ ಬರೆಯಲು ಅನುಕೂಲವಾಗಿದೆ ಎಂದು ನಗರ ಘಟಕದ ಅಧ್ಯಕ್ಷ ಶಿವನಾಗ್ ಶೆಟ್ಟರ್ ಹೇಳಿದರು.
ಬಿಡದಿ ಉಪತಹಸೀಲ್ದಾರ್ ಮಂಜುನಾಥ್, ರೈತ ರಾಮಯ್ಯ ಅವರನ್ನು ಗೌರವಿಸಲಾಯಿತು. ಇದೇ ವೇಳೆ ಸೈರನ್ ಚಿತ್ರದ ಟೀಸರ್ ಬಿಡುಗಡೆ ಮಾಡಲಾಯಿತು. ಮಿಮಿಕ್ರಿ
ಗೋಪಿ ಮತ್ತು ಸರಿಗಮಪ ಖ್ಯಾತಿ ಗಾಯಕರಿಂದ ಸಂಗೀತ ರಸಮಂಜರಿ ನಡೆಯಿತು.
ಸಾಹಿತಿ ನಾಗೇಂದ್ರ ಪ್ರಸಾದ್, ನಟ ಪ್ರವೀಣ್ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷ ಶಿವರಾಜ್‍ಗೌಡ, ಜಗದೀಶ್‍ಗೌಡ, ಜಿಲ್ಲಾ ಉಸ್ತುವಾರಿ ಅಧ್ಯಕ್ಷ ಕನ್ನಡ ಮಂಜು, ಜಿಲ್ಲಾಧ್ಯಕ್ಷ ರಾಜು, ಬಿಡದಿ ಪುರಸಭೆ ಸದಸ್ಯ ಸಿ. ಉಮೇಶ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಲ್. ಚಂದ್ರಶೇಖರ್, ಬೆಟ್ಟಸ್ವಾಮಿ, ಶೇಷಪ್ಪ, ರಮೇಶ್‍ಕುಮಾರ್, ಡಾ. ಭರತ್, ನಾಗೇಶ್, ಅರಸು, ಶಶಿಕುಮಾರ್, ಚೇತನ್‍ರೆಡ್ಡಿ, ಉಮಾಶಂಕರ್, ಉಮೇಶ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.