ಶನಿವಾರ, ಜನವರಿ 23, 2021
28 °C

ಕರ್ನಾಟಕ ಬಂದ್‍ಗೆ ಕರವೇ ಬೆಂಬಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಕನ್ನಡಪರ ಸಂಘಟನೆಗಳು ಇದೇ 5ರಂದು ಕರೆ ನೀಡಿರುವ ಕರ್ನಾಟಕ ಬಂದ್‍ನ್ನು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಬೆಂಬಲಿಸಲಿದೆ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ
ಕಬ್ಬಾಳೇಗೌಡ ತಿಳಿಸಿದರು.

‘ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮೂಲಕ ನಾಡದ್ರೋಹ ಕೆಲಸ ಮಾಡಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸುವ ಜೊತೆಗೆ ಕನ್ನಡಪರ ಹೋರಾಟಗಾರರ ಕುರಿತು ಶಾಸಕರಾದ ಬಸನಗೌಡ ಪಾಟೀಲ್
ಯತ್ನಾಳ, ರೇಣುಕಾಚಾರ್ಯ, ಅರವಿಂದ ಬೆಲ್ಲದ್ ಸೇರಿದಂತೆ ಅನೇಕರು ಗೇಲಿ ಮಾಡಿರುವುದನ್ನು ಪ್ರತಿಯೊಬ್ಬ ಕನ್ನಡಿಗನೂ ಖಂಡಿಸಬೇಕಾಗಿದೆ. ಹೀಗಾಗಿ ಬಂದ್ ಬೆಂಬಲಿಸಲು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ
ಸೂಚನೆ ನೀಡಿದ್ದಾರೆ. ಶನಿವಾರದ ಬಂದ್‌ನಲ್ಲಿ ಭಾಗವಹಿಸುತ್ತೇವೆ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಸತ್ಯನಾರಾಯಣ ಮಾತನಾಡಿ, ಬಂದ್ ದಿನ ಕರವೇ ಕಾರ್ಯಕರ್ತರು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು, ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಘೋಷಣೆ ಕೂಗುತ್ತೇವೆ ಎಂದರು.

ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್, ಜಿಲ್ಲಾ ರೈತ ಘಟಕದ ಅಧ್ಯಕ್ಷ ಶಂಭುಗೌಡ, ಪದಾಧಿಕಾರಿಗಳಾದ ಹೊ.ಪು.ಸಾಗರ್, ದೇವರಾಜು, ಅಭಿಲಾಷ್, ನಿಖಿಲ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು