ರಾಮನಗರ: ಜಿಲ್ಲೆಯ ನಾಲ್ಕು ಕ್ಷೇತ್ರಗಳ ಪೈಕಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಚನ್ನಪಟ್ಟಣಕ್ಕೆ ಮಾತ್ರ ಅಭ್ಯರ್ಥಿಯನ್ನು ಹೆಸರಿಸಿಲ್ಲ.
ನಿರೀಕ್ಷೆಯಂತೆಯೇ ರಾಮನಗರ ಕ್ಷೇತ್ರದಿಂದ ಇಕ್ಬಾಲ್ ಹುಸೇನ್ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಇಲ್ಲಿ ಡಿ.ಕೆ. ಸುರೇಶ್ ಹೆಸರನ್ನು ಈಚೆಗೆ ತೇಲಿಬಿಡಲಾಗಿತ್ತು.
ಕನಕಪುರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಣಕ್ಕೆ ಇಳಿಯಲಿದ್ದಾರೆ. ಮಾಗಡಿಯಲ್ಲಿ ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಸ್ಪರ್ಧೆ ಖಚಿತವಾಗಿದೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನಿಂದ ಪ್ರಸನ್ನ ಗೌಡ ಟಿಕೆಟ್ ಆಕಾಂಕ್ಷಿ ಆಗಿದ್ದರು. ಜೆಡಿಎಸ್ ನಿಂದ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿಯಿಂದ ಸಿ.ಪಿ. ಯೋಗೇಶ್ವರ್ ಹೆಸರು ಚಾಲ್ತಿಯಲ್ಲಿದೆ. ಈ ನಡುವೆ ಕಾಂಗ್ರೆಸ್ ತನ್ನ ಅಭ್ಯರ್ಥಿ ಗುಟ್ಟು ಬಿಟ್ಟುಕೊಡದೇ ಇರುವುದು ಕುತೂಹಲಕ್ಕೆ ಕಾರಣವಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.