ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಜೆಡಿಎಸ್ ಸೇರಿದ ಚನ್ನಪಟ್ಟಣ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಪ್ರಸನ್ನ ಗೌಡ

Last Updated 26 ಮಾರ್ಚ್ 2023, 7:40 IST
ಅಕ್ಷರ ಗಾತ್ರ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಸಂಭಾವ್ಯ ಅಭ್ಯರ್ಥಿ ಎಂದೇ ಬಿಂಬಿಸಲ್ಪಟ್ಟಿದ್ದ ಪ್ರಸನ್ನ ಗೌಡ ಜೆಡಿಎಸ್ ಸೇರುವುದಾಗಿ ಘೋಷಿಸಿದ್ದಾರೆ.

ಭಾನುವಾರ ಮೈಸೂರಿನಲ್ಲಿ ನಡೆದಿರುವ ಪಂಚರತ್ನ ಯಾತ್ರೆ ಸಮಾರೋಪಕ್ಕೂ‌ ಮುನ್ನ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಎದುರು ಅವರು ಈ ಘೋಷಣೆ ಮಾಡಿದರು.

ಈ ಸಂದರ್ಭ ಮಾತನಾಡಿದ ಪ್ರಸನ್ನ ಗೌಡ ' ನಾನು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಬೇಕಿತ್ತು. ಆದರೆ ಕಾಂಗ್ರೆಸ್ ನಾಯಕತ್ವದಿಂದ ಬೇಸತ್ತಿದ್ದೇನೆ. ಆ ಪಕ್ಷದಲ್ಲಿ ಸ್ಪಷ್ಟ ನಿಲುವು ಇಲ್ಲ. ಸುಳ್ಳು ಘೋಷಣೆಗಳನ್ನು ಮಾಡಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರ ನಾಯಕತ್ವ ಮೆಚ್ಚಿ ಜೆಡಿಎಸ್ ಸೇರುತ್ತಿದ್ದೇನೆ' ಎಂದರು.

ಚನ್ನಪಟ್ಟಣ ಜೆಡಿಎಸ್ ಅಭ್ಯರ್ಥಿಯೂ ಆಗಿರುವ ಕುಮಾರಸ್ವಾಮಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪರವಾಗಿ ಕೆಲಸ ಮಾಡುವುದಾಗಿ ಪ್ರಸನ್ನ ಹೇಳಿದ್ದಾರೆ. ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದರು.

ಶನಿವಾರವಷ್ಟೇ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ ಆಗಿದ್ದು, ಅದರಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಆಗಿರಲಿಲ್ಲ. ಅದರ ಚೆನ್ನಲ್ಲೇ ಪ್ರಸನ್ನ ಜೆಡಿಎಸ್ ಸೇರಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ತವರು ಜಿಲ್ಲೆಯಲ್ಲೇ ಹಿನ್ನಡೆ ಆದಂತೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT