ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಗೆ, ಸಿದ್ದು ಭೇಟಿ ಮಾಡಿದ ತಕ್ಷಣಕ್ಕೆ ಕಾಂಗ್ರೆಸ್‌ಗೆ ಹೋಗುವುದಿಲ್ಲ: ವಿಶ್ವನಾಥ್

Last Updated 9 ಡಿಸೆಂಬರ್ 2022, 7:53 IST
ಅಕ್ಷರ ಗಾತ್ರ

ಚನ್ನಪಟ್ಟಣ: ‘ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಸೌಜನ್ಯಯುತವಾಗಿದ್ದು, ಅದರಲ್ಲಿ ರಾಜಕೀಯ ಉದ್ದೇಶ ಇಲ್ಲ. ನಾನು ಯಾವುದೇ ಟಿಕೆಟ್‌ ಆಕಾಂಕ್ಷಿ ಅಲ್ಲ’ ಎಂದು ಮಾಜಿ ಸಚಿವ ಎಚ್‌. ವಿಶ್ವನಾಥ್‌ ಹೇಳಿದರು.

ಚನ್ನಪಟ್ಟಣ ತಾಲ್ಲೂಕಿನ ಸಿಂಗರಾಜಿಪುರದಲ್ಲಿ ಗುರುವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ನಮ್ಮ ರಾಜ್ಯದ ಖರ್ಗೆಯವರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅಂತೆಯೇ, ಸಿದ್ದರಾಮಯ್ಯ ಅವರು ಆಪರೇಷನ್‌ ಮಾಡಿಸಿಕೊಂಡಿದ್ದು ಈ ಕಾರಣಕ್ಕೆ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ. ಅವರನ್ನು ಭೇಟಿ ಮಾಡಿದ ತಕ್ಷಣಕ್ಕೆ ಕಾಂಗ್ರೆಸ್‌ಗೆ ಹೋಗುತ್ತೇನೆ ಎನ್ನಲು ಆಗುವುದಿಲ್ಲ. ನಾನು ಇವತ್ತಿಗೂ ಬಿಜೆಪಿಯಲ್ಲೇ ಇದ್ದೇನೆ’ ಎಂದು ಪ್ರತಿಕ್ರಿಯಿಸಿದರು.

‘ನನಗೀಗ 75 ವರ್ಷ ಆಗಿದೆ. ಶಾಸಕನಾಗಿ ಎಲ್ಲ ಮಜಲುಗಳನ್ನು ನೋಡಿದ್ದೇನೆ. ಯುವಕರಿಗೆ ಟಿಕೆಟ್ ನೀಡಲಿ. ನಾವು ಸಂಘಟನೆ ಮಾಡುತ್ತೇವೆ’ ಎಂದರು.

ಗುಜರಾತ್‌ ಹಾಗೂ ಹಿಮಾಚಲ ಪ್ರದೇಶ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿ ‘ ಹಿಂದೆಲ್ಲ ಕಾಂಗ್ರೆಸ್ ಎಲ್ಲ ಕಡೆ ಅಧಿಕಾರಕ್ಕೆ ಬರುತ್ತಿತ್ತು. ಈಗ ಕಾಲ, ನಾಯಕತ್ವ ಎಲ್ಲವೂ ಬದಲಾಗಿದೆ. ಸಂಘಟನಾ ಚತುರತೆ ಬದಲು ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ರಾಹುಲ್‌ ಗಾಂಧಿ ಸಹ ಭಾರತ್‌ ಜೋಡೊ ಮೂಲಕ ಸಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಎಲ್ಲ ಪಕ್ಷಗಳ ಸಿದ್ದಾಂತವನ್ನು ಜನರು ಒಪ್ಪುತ್ತಾರೆ. ಆದರೆ ಪಕ್ಷ ನಡೆಸುವ ನಾವಿಕನ ಎಡವಟ್ಟಿನಿಂದ ವಿರೋಧ ಪಕ್ಷದಲ್ಲಿ ಕೂರಬೇಕಾಗುತ್ತದೆ’ ಎಂದರು.

ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್‌ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯಿಸಿ ‘ ಗುಜರಾತ್‌ ಫಲಿತಾಂಶವನ್ನೇ 2023ರಲ್ಲಿ ಕರ್ನಾಟಕದಲ್ಲೂ ನಿರೀಕ್ಷೆ ಮಾಡಿದ್ದೇವೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಪ್ರಬಲ
ವಿರೋಧ ಪಕ್ಷವಾಗಿ ಕೆಲಸ ಮಾಡಲಿದೆ’ ಎಂದರು.

ಸಂಪುಟ ವಿಸ್ತರಣೆ ನಿರೀಕ್ಷೆ
‘ಗುಜರಾತ್ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದರು. ನಾಳೆ– ನಾಳಿದ್ದು ವಿಸ್ತರಣೆ ಆಗಬಹುದು ಎನ್ನುವ ನಿರೀಕ್ಷೆ ಇದೆ. ಮಾಡಬೇಕು ಎನ್ನುವುದು ನಮ್ಮ ಅಭಿಪ್ರಾಯ’ ಎಂದು ಸಿ.ಪಿ. ಯೋಗೇಶ್ವರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT