ರಾಮನಗರ: ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲಾಗುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.

ಮೊಬೈಲ್ ಗೀಳಿನಿಂದಾಗಿ ಮಕ್ಕಳಲ್ಲಿ ಹೆಚ್ಚಾಗಿರುವ ಸಾಮಾಜಿಕ ಜಾಲತಾಣ ಬಳಕೆಗೆ ಕಡಿವಾಣ ಹಾಕಲು ದೇಶದಲ್ಲೇ ಮೊಟ್ಟ ಮೊದಲಿಗೆ ಇಂತಹದ್ದೊಂದು ದಿಟ್ಟ ನಿರ್ಧಾರ ಕೈಗೊಳ್ಳಲಾಗಿದೆ. ಅಂದಹಾಗೆ ಈ ತೀರ್ಮಾನದ ಹಿಂದಿರುವುದು ನಮ್ಮದೇ ಜಿಲ್ಲೆಯಲ್ಲಿ ಉದಯಿಸಿ ರಾಜ್ಯ ವ್ಯಾಪಿಸಿದ ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಅಭಿಯಾನ!

ತಾಲ್ಲೂಕಿನ ಬಿಡದಿ ಹೋಬಳಿಯ ಬನ್ನಿಕುಪ್ಪೆ (ಬಿ) ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ (ಸಿಆರ್ಪಿ) ಆಗಿರುವ ಟಿ.ಎನ್. ಚಿಕ್ಕವೀರಯ್ಯ ಅವರು ವರ್ಷದ ಹಿಂದೆ ಆರಂಭಿಸಿದ್ದ ಅಭಿಯಾನದ ಪ್ರೇರಣೆಯಿಂದಾಗಿ, ಮಕ್ಕಳ ಸಾಮಾಜಿಕ ಜಾಲತಾಣ ಬಳಕೆಗೆ ನಿಷೇಧದಂತಹ ಕ್ರಾಂತಿಕಾರಕ ನಿರ್ಧಾರಕ್ಕೆ ಮುನ್ನುಡಿ ಬರೆದಿದೆ.

‘ಮೊಬೈಲ್ ಗೀಳಿನಿಂದ ವಿದ್ಯಾರ್ಥಿಗಳ ದೈಹಿಕ ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತಿದೆ. ಶೈಕ್ಷಣಿಕ ಬದುಕಿನ ಮೇಲು ನಕಾರಾತ್ಮಕ ಪ್ರಭಾವ ಬೀರುತ್ತಿದೆ. ಅತಿಯಾದ ಮೊಬೈಲ್ ಬಳಕೆಯಿಂದ ನಿದ್ರಾಹೀನತೆ, ಮೆದುಳಿನ ವಿಕಾಸದ ಮೇಲೆ ಪರಿಣಾಮ, ಹೃದಯ ರೋಗ ಸಂಬಂಧ ಹೆಚ್ಚುತ್ತಿರುವ ಈ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಗೊಂಡಿರುವ ಈ ನಿರ್ಧಾರ ಐತಿಹಾಸಿಕವಾದುದು’ ಎಂದು ಚಿಕ್ಕವೀರಯ್ಯ ‘ಪ್ರಜಾವಾಣಿ’ಯೊಂದಿಗೆ ಸಂತಸ ಹಂಚಿಕೊಂಡರು.

‘ಮೊಬೈಲ್ ಬಿಡಿ, ಪುಸ್ತಕ ಹಿಡಿ ಅಭಿಯಾನವನ್ನು ಇದೇ ದೃಷ್ಟಿಯಿಂದ ಕಳೆದ ವರ್ಷ ಏಪ್ರಿಲ್ 14ರಂದು ಬನ್ನಿಕುಪ್ಪೆ ಬಿ ಕ್ಲಸ್ಟರ್ನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಗಾಣಕಲ್ನಲ್ಲಿ ನಮ್ಮೆಲ್ಲ ಶಿಕ್ಷಕರ ಸಹಕಾರ ಪಡೆದು ಆರಂಭಿಸಿದೆ. ನಂತರ ಶಾಲೆಗಳಿಗೆ ವಿಸ್ತರಿಸಿ, ರಾಜ್ಯದ ಮೂಲೆ ಮೂಲೆಗಳು ತಲುಪಿತು’ ಎಂದು ಹೇಳಿದರು.

‘ಸಮೂಹ ಮಾಧ್ಯಗಳಿಂದಾಗಿ ಅಭಿಯಾನ ಹೆಚ್ಚು ಪ್ರಭಾವ ಬೀರಿತು. ಕಳೆದ ಒಂದು ವರ್ಷದಿಂದ ರಾಜ್ಯದ ಹಲವಾರು ಜಿಲ್ಲೆಗಳಿಗೆ ನಾನೂ ಸಹ ಭೇಟಿ ನೀಡಿ ನಿರಂತರವಾಗಿ ಈ ಕುರಿತು ಜಾಗೃತಿಯನ್ನು ಮೂಡಿಸುತ್ತಾ ಬರುತ್ತಿದ್ದೇನೆ. ಅದರ ಫಲವಾಗಿ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರ ಮೂಲಕ ಮುಖ್ಯಮಂತ್ರಿಗಳ ಗಮನಕ್ಕೂ ಬಂತು’ ಎಂದು ತಿಳಿಸಿದರು.

‘ಕಳೆದ ಸ್ವಾತಂತ್ರ್ಯ ದಿನಾಚರಣೆಯಂದು ಮುಖ್ಯಮಂತ್ರಿ ಅವರು ಅಭಿಯಾನವನ್ನು ಕರ್ನಾಟಕ ಸರ್ಕಾರ ಅಳವಡಿಸಿಕೊಂಡಿದೆ ಎಂದು ಘೋಷಿಸಿದರು. ನಮ್ಮ ಮಾತೃ ಇಲಾಖೆ ನನ್ನನ್ನು ಕರೆದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯಲ್ಲಿ ಇದರ ಯಶೋಗಾಥೆ ಕುರಿತು ಕಾರ್ಯಾಗಾರ ಮಾಡಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ತಲುಪಿಸಿತು. ಇದೀಗ ಶಾಲಾ–ಕಾಲೇಜಿನ ಶೈಕ್ಷಣಿಕ ಭಾಗವಾಗಿ ಅಭಿಯಾನವನ್ನು ಸೇರಿಸಲಾಗಿದೆ. ಅದರ ಮುಂದುವರಿದ ಭಾಗವಾಗಿ ಇಂದು ಬಜೆಟ್ನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸಲಾಗಿದೆ’ ಎಂದರು.

ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪೋಷಕರು ಶಿಕ್ಷಕರು ವಿದ್ಯಾರ್ಥಿಗಳ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ವಿದ್ಯಾರ್ಥಿಗಳ ಕಾಳಜಿಯ ಪರವಾದ ಈ ನಿರ್ಧಾರ ಐತಿಹಾಸಿಕವಾದುದು
– ಟಿ.ಎನ್. ಚಿಕ್ಕವೀರಯ್ಯ ಸಿಆರ್ಪಿ ಬನ್ನಿಕುಪ್ಪೆ (ಬಿ) ಕ್ಲಸ್ಟರ್ ರಾಮನಗರ ತಾಲ್ಲೂಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.