ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಗಳ ಮೇಲೆ ಕನ್ನಡದ ಬಾವುಟ ಅಭಿಯಾನಕ್ಕೆ ಬೆಂಬಲ: ಎಚ್‌ಡಿಕೆ ಮನೆ ಮೇಲೆ ನಾಡಧ್ವಜ

Last Updated 12 ಆಗಸ್ಟ್ 2022, 11:09 IST
ಅಕ್ಷರ ಗಾತ್ರ

ಬಿಡದಿ: ಕನ್ನಡ ಪರ ಸಂಘಟನೆಗಳು ಹಮ್ಮಿಕೊಂಡಿದ್ದ ಮನೆಗಳ ಮೇಲೆ ಕನ್ನಡದ ಬಾವುಟ ಹಾರಿಸುವ ಅಭಿಯಾನಕ್ಕೆ ಜೆಡಿಎಸ್ ಪಕ್ಷ ಬೆಂಬಲ ವ್ಯಕ್ತಪಡಿಸಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ತೋಟದ ಕೇತಗಾನಹಳ್ಳಿಯ ಮನೆಯ ಮೇಲೆ ಕನ್ನಡದ ಬಾವುಟ ಹಾರಿಸಿದ್ದಾರೆ.

ಆ.9ರಂದು ಭಾರತದ ಒಕ್ಕೂಟಕ್ಕೆ ಮೈಸೂರು ಸಂಸ್ಥಾನ ಸೇರ್ಪಡೆಯಾದ ಐತಿಹಾಸಿಕ ದಿನದ ಆಚರಣೆ ಅಂಗವಾಗಿ ಕನ್ನಡಪರ ಸಂಘಟನೆಗಳು ಮನೆಗಳ ಮೇಲೆ ಕನ್ನಡದ ಬಾವುಟ ಹಾರಿಸುವ ಅಭಿಯಾನವನ್ನು ಹಮ್ಮಿಕೊಂಡಿದ್ದವು.

ಅಭಿಯಾನದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ವಾಸ್ತವ್ಯ ಮಾಡಿರುವ ತೋಟದ ಮನೆಯಲ್ಲಿ ಕನ್ನಡದ ಬಾವುಟ ಹಾರಿಸಲಾಗಿದೆ. ಅದೇ ರೀತಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಮನೆಗಳ ಮೇಲೆ ಕನ್ನಡ ಬಾವುಟ ಹರಿಸಿ ಎಂದು ಎಚ್.ಡಿ. ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಕೋರಿದರು.

ಮೈಸೂರು ಸಂಸ್ಥಾನ ಸೇರ್ಪಡೆಯಾದ ಐತಿಹಾಸಿಕ ದಿನದ ಹೆಸರಿನಲ್ಲಿ ನಾಡಧ್ವಜ ಹಾರಿಸುವ ಅಭಿಯಾನವನ್ನು ಹಮ್ಮಿಕೊಂಡಿವೆ. ಈ ಅಭಿಯಾನಕ್ಕೆ ಜೆಡಿಎಸ್ ಬೆಂಬಲ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT