ಶನಿವಾರ, ಜನವರಿ 23, 2021
26 °C

ಸಿ.ಪಿ.ಯೋಗೇಶ್ವರ್ ಗ್ರಾಮದಲ್ಲಿ ಜೆಡಿಎಸ್ ಬೆಂಬಲಿಗರ ಪ್ರಾಬಲ್ಯ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

CP Yogeshwar

ಚನ್ನಪಟ್ಟಣ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರ ಸ್ವಗ್ರಾಮ ತಾಲ್ಲೂಕಿನ ಚಕ್ಕೆರೆ ಗ್ರಾಮದಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

ಗ್ರಾಮದಲ್ಲಿರುವ ಒಟ್ಟು 7ಕ್ಷೇತ್ರಗಳಲ್ಲಿ 5 ಮಂದಿ ಜೆಡಿಎಸ್ ಬೆಂಬಲಿತರು, 2 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಜಯ ಸಾಧಿಸಿರುವುದು ವಿಶೇಷವಾಗಿದೆ.

ಗ್ರಾ.ಪಂ.ನ ಒಟ್ಟು 14 ಸ್ಥಾನಗಳಲ್ಲಿ 12 ಮಂದಿ ಜೆಡಿಎಸ್ ಬೆಂಬಲಿತರು ಜಯಭೇರಿ ಬಾರಿಸಿದ್ದಾರೆ. ಕೇವಲ ಇಬ್ಬರು ಬಿಜೆಪಿ ಬೆಂಬಲಿತರು ಜಯ ಸಾಧಿಸಿದ್ದಾರೆ. ಆ ಮೂಲಕ ಯೋಗೇಶ್ವರ್ ಅವರ ಗ್ರಾಮ ವ್ಯಾಪ್ತಿಯ ಚಕ್ಕೆರೆ ಗ್ರಾ.ಪಂ.ನಲ್ಲಿ ಜೆಡಿಎಸ್ ಬೆಂಬಲಿಗರು ಅಧಿಕಾರ ಹಿಡಿದಂತಾಗಿದೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು