ಅಸ್ತಿತ್ವದ ಉಳಿವಿಗೆ ಆರ್‌ಎಸ್‌ಎಸ್ ವಿರುದ್ಧ ಸಿದ್ದರಾಮಯ್ಯ ಟೀಕೆ: ಅಶ್ವತ್ಥನಾರಾಯಣ

ರಾಮನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಆರ್‌ಎಸ್‌ಎಸ್ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಟೀಕಿಸಿದರು.
ನಗರದಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ಆರ್‌ಎಸ್‌ಎಸ್‌ನಲ್ಲಿ ಒಂದು ಜಾತಿಯವರಷ್ಟೇ ಕೆಲಸ ಮಾಡುತ್ತಿಲ್ಲ. ಎಲ್ಲರೂ ಇದ್ದಾರೆ. ನಾವೂ ಸಹ ಆರ್‌ಎಸ್‌ಎಸ್ ಭಾಗದವರೇ’ ಎಂದರು.
‘ಸಿದ್ದರಾಮಯ್ಯರಿಗೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಕಡು ಬಡತನದಿಂದ ಬಂದವರು ಪ್ರಾಮಾಣಿಕತೆ, ದಕ್ಷತೆ ಬಿಟ್ಟು ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದ್ದಾರೆ. ಅವರ ವಾಚ್, ಶೂ ಯಾವುದಕ್ಕಾದರೂ ಲೆಕ್ಕ ಇದೆಯೇ’ ಎಂದು ಪ್ರಶ್ನಿಸಿದರು.
ಓದಿ... ಆರ್‌ಎಸ್‌ಎಸ್ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? - ಸಿದ್ದರಾಮಯ್ಯ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.