ಶನಿವಾರ, ಸೆಪ್ಟೆಂಬರ್ 18, 2021
24 °C

ಯೋಗೇಶ್ವರ್‌ಗೆ ಏನು ಮಾತನಾಡಬೇಕು ಎಂಬ ಪರಿಜ್ಞಾನ ಇಲ್ಲ: ಕುಮಾರಸ್ವಾಮಿ ತಿರುಗೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ‘ಆ ವ್ಯಕ್ತಿಗೆ ಏನು ಮಾತನಾಡಬೇಕು ಎಂಬ ಪರಿಜ್ಞಾನ ಇಲ್ಲ. ಅಂತಹವರ ಬಗ್ಗೆ ನಾನೇನು ಮಾತನಾಡಲಿ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.‌ ಕುಮಾರಸ್ವಾಮಿ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದರು.

‘ಕುಮಾರಸ್ವಾಮಿ ಅವರು ಕೆಲಸ ಆಗಬೇಕಾದಾಗ ಯಡಿಯೂರಪ್ಪ ಬಳಿ ಹೋಗುತ್ತಾರೆ. ನಂತರ ಅವರನ್ನೇ ಟೀಕಿಸುತ್ತಾರೆ. ಹೀಗಾಗಿ ಯಡಿಯೂರಪ್ಪ ಅವರಿಗೆ ಕುಮಾರಸ್ವಾಮಿ ಯನ್ನು ದೂರ ಇಡಿ ಎಂದಿದ್ದೆ’ ಎಂಬ ಯೋಗೇಶ್ವರ್ ಹೇಳಿಕೆ‌ ಕುರಿತು ಅವರು ಶುಕ್ರವಾರ ರಾಮನಗರದಲ್ಲಿ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದರು.  

ನಾನು ಮೈಷುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ಕೊಡಬೇಡಿ ಎಂದು ಹೇಳಲು ಮುಖ್ಯಮಂತ್ರಿ ಬಳಿ ಹೋಗಿದ್ದೆ. ರಾಮನಗರ ರೇಷ್ಮೆ ಮಾರುಕಟ್ಟೆ‌ ವಿಚಾರವಾಗಿ‌ ವಿಧಾನಸೌಧಕ್ಕೂ ಹೋಗಿದ್ದೆ. ಆದರೆ ವೈಯಕ್ತಿಕ ಕೆಲಸಕ್ಕಾಗಿ ಯಾವ ಸಿ.ಎಂ. ಹತ್ತಿರವೂ ಹೋಗಿಲ್ಲ. ಯಾರ ಬಳಿಯೂ ರಾಜಿ ಆಗಿಲ್ಲ. ಇಂತಹ ವ್ಯಕ್ತಿಗಳಿಂದ ನಾನು ರಾಜಕೀಯ ಕಲಿಯಬೇಕಿಲ್ಲ ಎಂದರು.

ಇದನ್ನೂ ಓದಿ... ಮುಖ್ಯಮಂತ್ರಿ ಬದಲಾವಣೆ ಚರ್ಚೆ: 'ಫಲಿತಾಂಶ ಬಂದಾಯ್ತಲ್ಲ'– ಸಿ.ಪಿ.ಯೋಗೇಶ್ವರ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು