ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳ್ಳಿರಥದಲ್ಲಿ ಕೆಂಪೇಗೌಡರ ಭಾವಚಿತ್ರ ಮೆರವಣಿಗೆ

Published 28 ಜೂನ್ 2024, 6:31 IST
Last Updated 28 ಜೂನ್ 2024, 6:31 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಗುರುವಾರ ನಗರದಲ್ಲಿ ಅದ್ಧೂರಿಯಾಗಿ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.

ನಗರದ ಗಾಂಧಿಭವನ ಮುಂಭಾಗದಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರವನ್ನು ಬೆಳ್ಳಿರಥದಲ್ಲಿಟ್ಟು ಪೂರ್ಣಕುಂಭ ಕಳಸ, ವಿವಿಧ ಜಾನಪದ ಕಲಾತಂಡಗಳಾದ ಡೊಳ್ಳು ಕುಣಿತ, ಪೂಜಾ ಕುಣಿತ, ತಮಟೆ ನಗಾರಿ ಸದ್ದು, ಶಾಲಾ ಮಕ್ಕಳ ಆಕರ್ಷಕ ಬ್ಯಾಂಡ್ ಸೆಟ್ ಮೂಲಕ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಲಾಯಿತು.

ನಂತರ ತಾ.ಪಂ. ಕಚೇರಿ ಆವರಣದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು.

ತಹಶೀಲ್ದಾರ್ ನರಸಿಂಹಮೂರ್ತಿ, ಕುವೆಂಪು ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಎಚ್.ಎಲ್.ರವೀಂದ್ರ, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಚನ್ನೇಗೌಡ, ನಗರಸಭಾ ಸದಸ್ಯ ಸತೀಶ್ ಬಾಬು, ತಾ.ಪಂ. ಇ.ಒ.ಶಿವಕುಮಾರ್, ನಗರಸಭಾ ಪೌರಾಯುಕ್ತ ಪುಟ್ಟಸ್ವಾಮಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜು, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಟಿ.ನಾಗೇಶ್, ವಿವಿಧ ಪಕ್ಷಗಳ ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT