ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪೇಗೌಡ ಜಯಂತಿ: ಸಿದ್ಧತೆಗೆ ಸೂಚನೆ

ಸಿದ್ಧತೆ ಕುರಿತು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ನೇತೃತ್ವದಲ್ಲಿ ಸಭೆ
Published 9 ಜೂನ್ 2023, 15:51 IST
Last Updated 9 ಜೂನ್ 2023, 15:51 IST
ಅಕ್ಷರ ಗಾತ್ರ

ರಾಮನಗರ: ‘ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಜೂನ್ 27ರಂದು ಅದ್ಧೂರಿಯಾಗಿ ಆಚರಿಸಬೇಕು. ಯಾವುದಕ್ಕೂ ಕೊರತೆ ಉಂಟಾಗದಂತೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಸೂಚನೆ ನೀಡಿದರು.

ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶುಕ್ರವಾರ ಹಮ್ಮಿಕೊಂಡಿದ್ದ  ಕೆಂಪೇಗೌಡ ಜಯಂತಿ ಆಚರಣೆಯ ರೂಪುರೇಷೆ ತಯಾರಿ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಾಗೂ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ಬೆಳಿಗ್ಗೆ ಜಯಂತಿ ಆಚರಿಸಲು ನಿರ್ಧರಿಸಲಾಗಿದೆ. ಅಂದು ಡಿ.ಸಿ ಕಚೇರಿಯನ್ನು ಹಸಿರು ತೋರಣಗಳಿಂದ ಸಿಂಗರಿಸಬೇಕು. ಕೆಂಪೇಗೌಡ ಅವರ ಪುತ್ಥಳಿಗೆ ಪುಷ್ಪಾಲಂಕಾರ ಮಾಡಬೇಕು’ ಎಂದು ತಿಳಿಸಿದರು.

‘ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಹ ಪಾಲ್ಗೊಳ್ಳುವುದರಿಂದ, ಅಂದು ಎಲ್ಲರಿಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಎಲ್ಲರಿಗೂ ಉಪಾಹಾರ ನೀಡಬೇಕು. ಅಹಿತಕರ ಘಟನೆಗೆ ಆಸ್ಪದವಿಲ್ಲದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್‌ ಒದಗಿಸಬೇಕು’ ಎಂದು ಪೊಲೀಸರಿಗೆ ಸೂಚಿಸಿದರು.

ಕೆಂಪೇಗೌಡರ ಜಯಂತೋತ್ಸವ ಸಮಿತಿ ಅಧ್ಯಕ್ಷ ಚಂದ್ರಯ್ಯ ಮಾತನಾಡಿ, ‘ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯಕ್ರಮ ಮುಗಿದ ಬಳಿಕ, ಅಂಬೇಡ್ಕರ್ ಭವನದ ಎದುರು ಸಮಿತಿ ವತಿಯಿಂದಲೂ ಕೆಂಪೇಗೌಡರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುವುದು’ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಮಮತಾ, ಪೊಲೀಸ್ ಅಧಿಕಾರಿ ನರಸಿಂಹಮೂರ್ತಿ, ಜಿಲ್ಲಾ ಗ್ರಂಥಾಲಯ ಅಧಿಕಾರಿ ಜಯಕುಮಾರ್, ರೇಷ್ಮೆ ಇಲಾಖೆ ಉಪ ನಿರ್ದೇಶಕ ಕೆ.ಎನ್. ರವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್ ಬಾಬು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT