ಶುಕ್ರವಾರ, ಜೂನ್ 5, 2020
27 °C

15 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಸಮಾಧಿ ಅಭಿವೃದ್ಧಿ: ಡಾ. ಅಶ್ವತ್ಥ ನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಮಾಗಡಿ ತಾಲ್ಲೂಕಿನ ಕೆಂಪಾಪುರದಲ್ಲಿರುವ ನಾಡಪ್ರಭು ಕೆಂಪೇಗೌಡರ ಸಮಾಧಿಯನ್ನು 15 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ತಿಳಿಸಿದರು.

ಕೆಂಪಾಪುರದಲ್ಲಿರುವ ಕೆಂಪೇಗೌಡರ ಸಮಾಧಿಗೆ ಶುಕ್ರವಾರ ಪೂಜೆ ಸಲ್ಲಿಸಿದ ನಂತರ ಅವರು  ಮಾತನಾಡಿದರು. ಕೆಂಪೇಗೌಡರ ಸಮಾಧಿ ಅಭಿವೃದ್ಧಿಗೆ 8 ಎಕರೆ ಜಮೀನು ಬೇಕಿದ್ದು, ಇದನ್ನು ಭೂಸ್ವಾಧೀನ ಮಾಡುವ ಕೆಲಸ ಪ್ರಾರಂಭಿಸಲಾಗುವುದು. ರೈತರಿಗೂ ಸಹ ಅನುಕೂಲವಾಗುವಂತೆ ಸುಸಜ್ಜಿತವಾಗಿ ಕೆಂಪಾಪುರದ ಸರ್ವಂಗೀಣ ಅಭಿವೃದ್ಧಿ ಮಾಡಲಾಗುವುದು. ಕೆಂಪಾಪುರದಲ್ಲಿರುವ ಕೆರೆಯ ಅಭಿವೃದ್ಧಿಗೂ 12 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ನೀಲನಕ್ಷೆ ಕೂಡ ಸಿದ್ಧಪಡಿಲಾಗಿದ್ದು, ಗ್ರಾಮಸ್ಥರು ಸಹಕಾರ ನೀಡಿದರೆ ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು ಎಂದರು.

ಸರ್ಕ್ಯೂಟ್ ನೆಟ್‌ವರ್ಕ್

ನಾಡಪ್ರಭು ಕೆಂಪೇಗೌಡರ ಕಾಲದ ದುರ್ಗ, ಕೆರೆ, ದೇವಸ್ಥಾನಗಳ ಸರ್ಕ್ಯೂಟ್ ನೆಟ್‌ವರ್ಕ  ಸಹ ಸಿದ್ಧಪಡಿಸಲಾಗುವುದು ಎಂದರು.

108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸರ್ದಾರ್ ವಲ್ಲಾಬಾಯಿ ಪ್ರತಿಮೆಯ ರೀತಿಯಲ್ಲೇ 108 ಅಡಿ ಕೆಂಪೇಗೌಡರ ಪ್ರತಿಮೆಯನ್ನು ನಿರ್ಮಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. 23 ಎಕರೆಯ ವಿಸ್ತೀರ್ಣದಲ್ಲಿ ವಿಮಾನ ನಿಲ್ದಾಣದ ಮೂರು ಟರ್ಮಿನಲ್ ಸೇರುವ ಸ್ಥಳದಲ್ಲಿ 66 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಜೂನ್ 27ರಂದು ಕೆಂಪೇಗೌಡರ ಜಯಂತಿ ದಿನದಂದು ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗುವುದು ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು