ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೇರಳ ರಾಜ್ಯ ಲಾಟರಿ ಮಾರಾಟ: ಇಬ್ಬರ ಬಂಧನ

Published 1 ಸೆಪ್ಟೆಂಬರ್ 2024, 16:43 IST
Last Updated 1 ಸೆಪ್ಟೆಂಬರ್ 2024, 16:43 IST
ಅಕ್ಷರ ಗಾತ್ರ

ಚನ್ನಪಟ್ಟಣ: ಕೇರಳ ರಾಜ್ಯ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ನಗರದ ಪೂರ್ವ ಪೊಲೀಸ್ ಠಾಣೆ ಪೊಲೀಸರು ಶನಿವಾರ  ಬಂಧಿಸಿ ಸಾವಿರಾರು ರೂಪಾಯಿ ಮೌಲ್ಯದ ಲಾಟರಿ ಟಿಕೆಟ್ ವಶಪಡಿಸಿಕೊಂಡಿದ್ದಾರೆ.

ನಗರದ ಎಂ.ಜಿ.ರಸ್ತೆ ನಿವಾಸಿ ನಾಗೇಶ್(50) ಹಾಗೂ ಬಿ.ಎಂ.ಸ್ಟ್ರೀಟ್ ನಿವಾಸಿ ಸೈಯದ್ ಮುನಾವರ್(35) ಬಂಧಿತ ಆರೋಪಿಗಳು.

ಇವರು ನಗರದ ಮದಿನಾಚೌಕ, ಮಂಡೀಪೇಟೆ ಮುಂತಾದ ಕಡೆ ಕೇರಳ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದರು. ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT