ಶುಕ್ರವಾರ, ಫೆಬ್ರವರಿ 21, 2020
18 °C

ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಜಿಲ್ಲೆಯಲ್ಲಿ 1,24,653 ರೈತರು ಪಿ.ಎಂ. ಕಿಸಾನ್ ಯೋಜನೆಯಡಿಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ಮಾಡಿಕೊಂಡು ಕಿಸಾನ್ ಕ್ರೆಡಿಟ್ ಕಾರ್ಡ್(ಕೆ.ಸಿ.ಸಿ) ಪಡೆಯದ ರೈತರು ಸೇವಾ ವಲಯದ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಿ ಬೆಳೆಸಾಲ (ಕಿಸಾನ್ ಕ್ರೆಡಿಟ್ ಕಾರ್ಡ್) ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದ್ದಾರೆ.

ಪಿ.ಎಂ. ಕಿಸಾನ್ ಯೋಜನೆಯಡಿಯಲ್ಲಿ ದೇಶಾದ್ಯಂತ 9.22 ಕೋಟಿ ರೈತರು ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ 6.76 ಕೋಟಿ ಫಲಾನುಭವಿಗಳು ಕಿಸಾನ್ ಕ್ರೆಡಿಟ್ ಕಾರ್ಡ್ (ಬೆಳೆಸಾಲ) ಪಡೆದಿದ್ದು, 2.47 ಕೋಟಿ ಫಲಾನುಭವಿಗಳು ಇದರ ಲಾಭ ಪಡೆಯಲು ಬಾಕಿ ಇರುತ್ತಾರೆ.

ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಒಂದು ವರ್ಷ ಪೂರೈಸುತ್ತಿರುವ ಈ ಸುಸಂದರ್ಭದಲ್ಲಿ ಕೇಂದ್ರ ಸರ್ಕಾರ 24-02-2020ರ ಒಳಗೆ ಒಂದು ಕೋಟಿ ಕಿಸಾನ್ ಕ್ರೆಡಿಟ್ ಕಾರ್ಡ್ಗಳನ್ನು (ಬೆಳೆಸಾಲ) ಯೋಜನೆಯ ಫಲಾನುಭವಿಗಳಿಗೆ ವಿತರಿಸಲು ಬ್ಯಾಂಕ್ ಗಳಿಗೆ ನಿರ್ದೇಶಿಸಲಾಗಿದೆ.

ಜಿಲ್ಲೆಯ ಎಲ್ಲ ಬ್ಯಾಂಕಿನ ಶಾಖಾ ವ್ಯವಸ್ಥಾಪಕರು ಪಿ.ಎಂ. ಕಿಸಾನ್ ಫಲಾನುಭವಿಗಳಿಗೆ ನಿಯಮಾನುಸಾರ ಆದ್ಯತೆ ಮೇರೆಗೆ ಬೆಳೆಸಾಲ (ಕೆ.ಸಿ.ಸಿ.) ವಿತರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆ.ಡಿ.ಪಿ ಸಭೆ

ಜಿಲ್ಲಾ ಪಂಚಾಯಿತಿ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ಇದೇ 14ರಂದು ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಸಿಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್. ಬಸಪ್ಪ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಜಾನಪದ ಲೋಕ ಬೆಳ್ಳಿಹಬ್ಬ

ಕರ್ನಾಟಕ ಜಾನಪದ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಾನಪದ ಲೋಕ ಬೆಳ್ಳಿಹಬ್ಬ ಕಾರ್ಯಕ್ರಮವನ್ನು ಇದೇ 16 ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜಾನಪದ ಕ್ಷೇತ್ರದಲ್ಲಿ ದುಡಿದ ಗಣ್ಯರಿಗೆ ಸನ್ಮಾನ ಹಾಗೂ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ ಜಾನಪದ ಜಗತ್ತು ಬೆಳ್ಳಿ ಹಬ್ಬ ಸಂಚಿಕೆ ಮತ್ತು ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಹಾಪೌರ ಗೌತಮ್ ಕುಮಾರ್ ಜಾನಪದ ಮೆರವಣಿಗೆ ಉದ್ಘಾಟಿಸಲಿದ್ದಾರೆ. ಶಾಸಕ ಡಾ. ಉದಯ ಬಿ. ಗರುಡಾಚಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಟಿ ತಿಮ್ಮೇಗೌಡ ಪ್ರಾಸ್ತಾವಿಕ ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)