ಸೋಮವಾರ, ಆಗಸ್ಟ್ 8, 2022
24 °C

ರುದ್ರಭೂಮಿ ಕಾವಲುಗಾರರಿಗೆ ಕಿಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಜನಸೇವಾ ಫೌಂಡೇಷನ್ ವತಿಯಿಂದ ನಗರದ ಹಿಂದೂ ರುದ್ರ ಭೂಮಿ ಕಾವಲುಗಾರರಿಗೆ ಭಾನು ವಾರ ದಿನಸಿ ಪದಾರ್ಥಗಳ ಕಿಟ್ ವಿತರಿಸಲಾಯಿತು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು ಮಾತನಾಡಿ, ಕೋವಿಡ್‌ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಮಾಜದ ಎಲ್ಲ ವರ್ಗದವರು ಸಂಕಷ್ಟದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಸವಿತಾ ಸಮಾಜ, ಆಟೊ ಚಾಲಕರು ಹಾಗೂ ರುದ್ರಭೂಮಿ ಕಾವಲುಗಾರರ ಸಂಕಷ್ಟವನ್ನು ಗುರುತಿಸಿದ ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಡಿ. ನರೇಂದ್ರ ತಮ್ಮ ಕೈಲಾದ ಸೇವೆ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಇದೇ ಸಂದರ್ಭದಲ್ಲಿ ರುದ್ರಭೂಮಿ ಕಾವಲುಗಾರರನ್ನು ಸನ್ಮಾನಿಸಲಾಯಿತು. ದಾನಿ ಡಿ. ನರೇಂದ್ರ, ಬಿಜೆಪಿ ಜಿಲ್ಲಾ ಖಜಾಂಚಿ ಮಲ್ಲೇಶ್, ಜಿಲ್ಲಾ ‌ಮಾಧ್ಯಮ ಚಂದ್ರಶೇಖರ ರೆಡ್ಡಿ, ನಗರ ಮಂಡಲ ಅಧ್ಯಕ್ಷ ಪಿ. ಶಿವಾನಂದ, ಪ್ರಧಾನ ಕಾರ್ಯದರ್ಶಿ ಜೆ. ದರ್ಶನ್, ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಬರಿ, ನಗರ ಯುವ ಮೋರ್ಚಾ ಅಧ್ಯಕ್ಷ ಲೋಕೇಶ್, ರಂಗಸ್ವಾಮಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.