ಚನ್ನಪಟ್ಟಣ: ತಾಲ್ಲೂಕಿನ ಕೋಡಂಬಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕೊಂಡಾಪುರ ಕೆ.ಬಿ. ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ರಾಜಣ್ಣ ಒಬ್ಬರೇನಾಮಪತ್ರ ಸಲ್ಲಿಸಿದ್ದರು.

ರಾಜಣ್ಣ ಮಾತನಾಡಿ, ‘ಸರ್ಕಾರದ ಸವಲತ್ತುಗಳನ್ನು ಗ್ರಾ.ಪಂ. ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡುತ್ತೇನೆ. ಅಭಿವೃದ್ಧಿಗೆ ಎಲ್ಲಾ ಸದಸ್ಯರ ಜೊತೆಗೂಡಿ ಶ್ರಮಿಸುತ್ತೇನೆ’ ಎಂದರು.

ಗ್ರಾಮಗಳ ಅಭಿವೃದ್ಧಿಗೂ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.

ರಾಜಣ್ಣ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು. ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಆರ್. ಪ್ರಮೋದ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಕುಮಾರ್, ಹಾಪ್‌ಕಾಮ್ಸ್ ನಿರ್ದೇಶಕ ಶಿವಮಾದು, ಗ್ರಾ.ಪಂ. ಸದಸ್ಯರು, ಸ್ಥಳೀಯ ಮುಖಂಡರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.