ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮನಗರ | ಬಿಡದಿ ತೋಟದಲ್ಲಿ ಕೋಲಾರ ರಾಜಕೀಯ ಚರ್ಚೆ

Published 3 ಫೆಬ್ರುವರಿ 2024, 16:14 IST
Last Updated 3 ಫೆಬ್ರುವರಿ 2024, 16:14 IST
ಅಕ್ಷರ ಗಾತ್ರ

ರಾಮನಗರ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಶನಿವಾರ ಕೋಲಾರ ಲೋಕಸಭೆ ಕ್ಷೇತ್ರದ ಜೆಡಿಎಸ್‌ ಮುಖಂಡರ ಜತೆ ಸಮಾಲೋಚನೆ ನಡೆಸಿದರು.

ಬಿಡದಿ ಬಳಿಯ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಸಭೆಯಲ್ಲಿ ಕೋಲಾರ ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಹಾಗೂ ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳು ಭಾಗವಹಿಸಿದ್ದರು. 

ಕೋಲಾರ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ, ಚುನಾವಣೆ ತಯಾರಿ, ಸೂಕ್ತ ಅಭ್ಯರ್ಥಿಗಳ ಬಗ್ಗೆ ಕುಮಾರಸ್ವಾಮಿ ಮಾಹಿತಿ ಪಡೆದರು.

ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್‌ನ ಮೂವರು ಶಾಸಕರಿದ್ದು, ವಿಧಾನಸಭೆ ಚುನಾವಣೆಯಲ್ಲಿ ಮತ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ. ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಸುಲಭವಾಗಿ ಗೆಲ್ಲಿಸಬಹುದು ಎಂದು ಮುಖಂಡರು ಸಲಹೆ ನೀಡಿದರು.

‘ಕೋಲಾರದಲ್ಲಿ ಜೆಡಿಎಸ್‌ ಪರ ಉತ್ತಮ ವಾತಾವರಣ ಇದೆ. ಎನ್‌ಡಿಎ ಸೇರಿದ ಕಾರಣ ಇನ್ನೂ ಅನುಕೂಲಕರ ವಾತಾವರಣ ಸೃಷ್ಟಿಯಾಗಿದೆ. ಸೀಟು ಹಂಚಿಕೆ ಚರ್ಚೆ ವೇಳೆ ಬಿಜೆಪಿ ವರಿಷ್ಠರ ಜತೆ ಚರ್ಚೆ ಮಾಡುತ್ತೇನೆ’ ಎಂದು ಕುಮಾರಸ್ವಾಮಿ ಹೇಳಿದರು.

‘ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಜಿಲ್ಲೆಯಲ್ಲಿ ಯಾವುದೇ ಗೊಂದಲ ಇಲ್ಲ. ಪರಸ್ಪರ ಹೊಂದಾಣಿಕೆ ಹಾಗೂ ಸಹಮತ ಭಾವದ ವಾತಾವರಣ ಇದೆ’ ಎಂದು ಸ್ಥಳೀಯ ಮುಖಂಡರು ಹೇಳಿದರು.

ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ, ಶಾಸಕರಾದ ವೆಂಕಟಶಿವಾ ರೆಡ್ಡಿ, ಸಮೃದ್ಧಿ ಮಂಜುನಾಥ್, ಮಾಲೂರು ರವಿ, ಇಂಚರ ಗೋವಿಂದರಾಜು ಹಾಗೂ ಕೆ.ಎಂ.ಕೃಷ್ಣಾರೆಡ್ಡಿ, ಚೌಡರೆಡ್ಡಿ ತೂಪಲ್ಲಿ, ಮಾಲೂರಿನ ರಾಮೇಗೌಡ, ಬಂಗಾರಪೇಟೆಯ ಮಲ್ಲೇಶ್ ಬಾಬು, ಕೋಲಾರದ ಸಿಎಂಆರ್ ಶ್ರೀನಾಥ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT