ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ ಜಿಲ್ಲೆಯಲ್ಲಿ ಕೋವಿಡ್‌ ಲ್ಯಾಬ್ ಆರಂಭ: ಸಚಿವ

Last Updated 3 ಜುಲೈ 2020, 16:54 IST
ಅಕ್ಷರ ಗಾತ್ರ

ಮಾಗಡಿ: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಪರಿಸ್ಥಿತಿ ಎದುರಾದರೂ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು ಎಂದು ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ತಿಳಿಸಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದರು.

ಪಟ್ಟಣದಲ್ಲಿ ಪ್ರತ್ಯೇಕ ಆರೋಗ್ಯ ಕೇಂದ್ರ ಆರಂಭಿಸಲಾಗುವುದು. ಮೂವರು ವೈದ್ಯರು, ಆರು ಜನ ನರ್ಸ್‌ಗಳು, ಪ್ರತ್ಯೇಕ ಅಂಬ್ಯುಲೆನ್ಸ್‌ ಮಾನಿಟರ್, ಸೀಪ್ಯಾಡ್, ವೆಂಟಿಲೇಟರ್ ಅನುಕೂಲ ಮಾಡಿಕೊಡಲಾಗುವುದು. ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಅಗತ್ಯವಾಗಿ ಬೇಕಾದ ಎಲ್ಲ ಅನುಕೂಲ ಕಲ್ಪಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಇದುವರೆಗೂ 9800 ಕೋವಿಡ್ ಪರೀಕ್ಷೆ ಮಾಡಿಸಲಾಗಿದೆ. ಜಿಲ್ಲಾ ಕೇಂದ್ರದಲ್ಲಿ ಕೋವಿಡ್ ಲ್ಯಾಬ್ ಆರಂಭಿಸಲಾಗುವುದು. ಅಲ್ಲಿವರೆಗೆ ಟ್ರೂಮ್ಯಾಟ್ ಮಿಷನ್ ಮೂಲಕ ಕೋವಿಡ್ ಪರೀಕ್ಷೆ ಮಾಡಿಸಿ 3ಗಂಟೆ ಒಳಗೆ ಫಲಿತಾಂಶ ಪ್ರಕಟಿಸುವ ವ್ಯವಸ್ಥೆ ಮಾಡಲಾಗವುದು ಎಂದರು.

ಪ್ರತ್ಯೇಕ ಸಭೆ: ಸಾವನದುರ್ಗ, ಹುತ್ರಿ, ಹುಲಿಯೂರು, ಭೈರವನ ದುರ್ಗಗಳ ಅಭಿವೃದ್ಧಿ ಬಗ್ಗೆ ಚರ್ಚಿಸಲು ಪ್ರತ್ಯೇಕ ಸಭೆ ಕರೆದು ಚರ್ಚಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್, ತಹಶೀಲ್ದಾರ್‌ ಬಿ.ಜಿ.ಶ್ರೀನಿವಾಸ ಪ್ರಸಾದ್‌, ಇಒ ಟಿ.ಪ್ರದೀಪ್‌, ಸರ್ಕಲ್‌ ಇನ್‌ ಸ್ಪೆಕ್ಟರ್‌ ಬಿ.ಎನ್‌.ಮಂಜುನಾಥ, ತಾಲ್ಲೂಕು ವೈದ್ಯಾಧಿಕಾರಿ ಡಾ.ಸತೀಶ್, ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಆರ್.ರಂಗನಾಥ್, ಆರೋಗ್ಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಶಿವಸ್ವಾಮಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT