ಚನ್ನಪಟ್ಟಣ (ರಾಮನಗರ): ತಾಲ್ಲೂಕಿನ ಹೊಂಗನೂರಿನಲ್ಲಿ ಕಣ್ವ ಫೌಂಡೇಷನ್ನ ಡಾ. ಎಂ.ವಿ. ವೆಂಕಟಪ್ಪ ಅವರು ನಿರ್ಮಿಸಿರುವ ಶ್ರೀಮತಿ ಚೆನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಗ್ರಾಮದಲ್ಲಿ ನಡೆಯಲಿದೆ.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟಿಸುವರು.

ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಕಂಪ್ಯೂಟರ್ ಲ್ಯಾಬ್ ಹಾಗೂ ಸಂಸದ ಡಾ. ಸಿ.ಎನ್. ಮಂಜುನಾಥ್ ಗ್ರಂಥಾಲಯವನ್ನು ಉದ್ಘಾಟಿಸುವರು. ಚನ್ನಪಟ್ಟಣ ಶಾಸಕ ಸಿ.ಪಿ. ಯೋಗೇಶ್ವರ್ ಘನ ಉಪಸ್ಥಿತಿ ವಹಿಸುವರು.
.ಚನ್ನಪಟ್ಟಣ: ಹುಟ್ಟೂರು ಸರ್ಕಾರಿ ಶಾಲೆಗೆ ₹14 ಕೋಟಿ ಹೈಟೆಕ್ ಕಟ್ಟಡ.
ರಾಜಾಜಿನಗರದ ಬಿಜೆಪಿ ಎಸ್. ಸುರೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಸಿ. ಪುಟ್ಟಣ್ಣ, ಎಸ್. ರವಿ, ರಾಮೋಜಿಗೌಡ, ಬಿಎಂಐಸಿಪಿಎ ಪ್ರಾಧಿಕಾರದ ಅಧ್ಯಕ್ಷ ರಘುನಂದನ್ ರಾಮಣ್ಣ, ಸರ್ಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.