ಕುದೂರು: ಕುದೂರು ಹೋಬಳಿ ಮಾದಿಗೊಂಡನಹಳ್ಳಿ ಬೆಟ್ಟದ ರಂಗನಾಥಸ್ವಾಮಿ ದೇವಾಲಯದ ನೂತನ ದೇಗುಲ ನಿರ್ಮಾಣದ ಶಿಲಾನ್ಯಾಸ ಮತ್ತು ಭೂಮಿಪೂಜೆ ಏ.20ರಂದು ಅಕ್ಷಯ ತೃತೀಯ ಸೋಮವಾರದ ಬೆಳಗ್ಗೆ 9:30ಕ್ಕೆ ನಡೆಯಲಿದೆ.

ಶಿಲಾನ್ಯಾಸ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನೆರವೇರಿಸಲಿದ್ದಾರೆ. ಶಿಲಾ ನ್ಯಾಸದ ಪೂಜಾ ಕಾರ್ಯಕ್ರಮವನ್ನು ಪಡುವಗೆರೆ ಚನ್ನಕೇಶವ ವೇದಾಗಮ ಪಾಠಶಾಲೆ ಸಂಸ್ಥಾಪಕ ನಾರಾಯಣಾಚಾರ್ಯರು ನೆರವೇರಿಸಲಿದ್ದಾರೆ.

ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ, ಸಂಸದ ಡಾ.ಸಿ.ಎನ್ ಮಂಜುನಾಥ್ ಹಾಗೂ ಕಳ್ಳೀಪಾಳ್ಯ ಮುನೇಶ್ವರ ಸಂಸ್ಥಾನದ ರಂಗನಾಥಾನಂದ ಸ್ವಾಮೀಜಿ ಹಾಗೂ ಮೈಸೂರು ಸೋಮನಾಥಸ್ವಾಮೀಜಿ, ಪಾಲನಹಳ್ಳಿ ಮಠದ ಸಿದ್ಧರಾಜುಸ್ವಾಮೀಜಿ ಮತ್ತು ವಿವಿಧ ಕ್ಷೇತ್ರಗಳ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ರಂಗನಾಥಸ್ವಾಮಿ ದೇಗುಲದ ಭಕ್ತರು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಗುರುಪೀಠಾಧ್ಯಕ್ಷ ಎಂ.ಆರ್ ರಾಮಸ್ವಾಮಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-14-1608082402

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.