ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮನಗರ| 'ಸಕಾಲದಲ್ಲಿ ಜನರ ಕೆಲಸ ಮಾಡಿ'

Published : 14 ಸೆಪ್ಟೆಂಬರ್ 2024, 6:42 IST
Last Updated : 14 ಸೆಪ್ಟೆಂಬರ್ 2024, 6:42 IST
ಫಾಲೋ ಮಾಡಿ
Comments

ಚನ್ನಪಟ್ಟಣ: ಸರ್ಕಾರಿ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಸಕಾಲಕ್ಕೆ ಮಾಡಿಕೊಡುವ ಮೂಲಕ ಸಾರ್ವಜನಿಕರ ಸೇವೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಲೋಕಾಯುಕ್ತ ಜಿಲ್ಲಾ ಎಸ್ಪಿ ಸ್ನೇಹಾ ಕಿವಿಮಾತು ಹೇಳಿದರು.

ನಗರದ ಶತಮಾನೋತ್ಸವ ಭವನದಲ್ಲಿ ಗುರುವಾರ ಆಯೋಜಿಸಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದರು. ಜನರನ್ನು ಹಣಕ್ಕಾಗಿ ಪೀಡಿಸಬಾರದು. ಸೂಕ್ತ ದಾಖಲೆಗಳು ಇಲ್ಲ ಎಂದರೆ ಹಿಂಬರಹ ನೀಡಿ ಅವರ ಸಮಯವನ್ನು ಉಳಿಸಬೇಕು. ಯಾವುದೇ ಅವ್ಯವಹಾರಕ್ಕೆ ಆಸ್ಪದ ಕೊಡಬಾರದು ಎಂದರು.

ಲೋಕಾಯುಕ್ತ ಡಿವೈಎಸ್ಪಿ ಅನಂತರಾಮ್ ಮಾತನಾಡಿ, ಸರ್ಕಾರಿ ಇಲಾಖೆಯಲ್ಲಿ ಕೆಲ ಅಧಿಕಾರಿಗಳು ಮಾಡುವ ತಪ್ಪಿನಿಂದ ಎಲ್ಲಾ ನೌಕರರಿಗೂ ಕೆಟ್ಟ ಹೆಸರು ಬರುತ್ತದೆ. ಕಂದಾಯ ಇಲಾಖೆಯಲ್ಲಿ ಆಸ್ತಿ ಮಾರಾಟ ಮಾಡುವ ವೇಳೆ ಡಾಟಾ ಆಪರೇಟರ್ ಮಾಡುವ ಸಣ್ಣ ತಪ್ಪಿನಿಂದ ಆ ವ್ಯಕ್ತಿ ದಾಖಲೆ ಬದಲಿಸಲು ತಾಲ್ಲೂಕು ಕಚೇರಿಗೆ ಅಲೆಯಬೇಕಾಗುತ್ತದೆ. ಇಂತಹ ತಪ್ಪುಗಳನ್ನು ಆರಂಭದಲ್ಲೇ ತಡೆಯುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿಗಾ ವಹಿಸಬೇಕು ಎಂದರು.

ಇದೇ ವೇಳೆ ಮಂಗಳವಾರಪೇಟೆಯ ಶ್ರೀನಿವಾಸ್ ಎಂಬುವರು ಮನೆ ಖಾತೆ ವಿಚಾರದಲ್ಲಿ ಅಧಿಕಾರಿಯೊಬ್ಬರಿಗೆ ₹5 ಲಕ್ಷ ಹಣ ನೀಡಿದ್ದರೂ ಕೆಲಸ ಆಗಿಲ್ಲ ಎಂದು ಲೋಕಾಯುಕ್ತರಿಗೆ ದೂರು ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಲೋಕಾಯುಕ್ತರು, ಈ ಬಗ್ಗೆ ಸಾಕ್ಷಿಗಳನ್ನು ಒದಗಿಸಿದರೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT