ರಾಮನಗರ: ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಲ್ಲದೇ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಮುಖ್ಯಮಂತ್ರಿಗಳ 50 ಕೋಟಿ ವಿಶೇಷ ಅನುದಾನದ ಅಡಿ ವಿವಿಧ ಕಾಮಗಾರಿಗೆ ಚಾಲನೆ ನೀಡಲು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಶನಿವಾರ ಬೆಳಿಗ್ಗೆ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣ ಗ್ರಾಮಕ್ಕೆ ಆಗಮಿಸಿದ್ದರು. ಸ್ಥಳೀಯ ಶಾಸಕರಾದ ಎಚ್.ಡಿ. ಕುಮಾರಸ್ವಾಮಿ ಅವರನ್ನೇ ದೂರ ಇಟ್ಟು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಯೋಗೇಶ್ವರ್ ಕಾರಿಗೆ ಮುತ್ತಿಗೆ ಹಾಕಿದರು. ಕಲ್ಲು ಹಾಗೂ ಮೊಟ್ಟೆ ಎಸೆದರು. ನೆರೆದಿದ್ದ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಪೊಲೀಸ್ ಭದ್ರತೆ ನಡುವೆ ಯೋಗೇಶ್ವರ್ ಕಾರ್ಯಕ್ರಮ ಮುಗಿಸಿ ಅಲ್ಲಿಂದ ಹೊರಟರು.

ಸಚಿವರು ಗೈರು: ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಶನಿವಾರ ಕಾಮಗಾರಿಗಳಿಗೆ ಚಾಲನೆ ನೀಡಬೇಕಿತ್ತು. ಆದರೆ ಬೆಳಿಗ್ಗೆಯಿಂದಲೇ ಪ್ರತಿಭಟನೆ ಜೋರಾಗಿದ್ದು, ಸಚಿವರು ಗೈರಾದರು.

ಇವುಗಳನ್ನೂ ಓದಿ

ಚನ್ನಪಟ್ಟಣ| ₹50 ಕೋಟಿ ಕಾಮಗಾರಿಗೆ ವಿರೋಧ: ಜೆಡಿಎಸ್ ಕಾರ್ಯಕರ್ತರು ವಶಕ್ಕೆ

ಬ್ಲ್ಯಾಕ್ಮೇಲ್ ಮಾಡಿ ಹಣ ಪಡೆದಿದ್ದರು: ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಆರೋಪ

ವೆಸ್ಟೆಂಡ್ ಹೋಟೆಲ್ನಲ್ಲಿ ಕುಮಾರಸ್ವಾಮಿ ರಾಸಲೀಲೆ: ಯೋಗೇಶ್ವರ್ ವಾಗ್ದಾಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.