ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ: ಇ-ಶ್ರಮ ಕಾರ್ಡ್ ನೋಂದಣಿಗೆ ಚಾಲನೆ

Published 21 ಜನವರಿ 2024, 12:47 IST
Last Updated 21 ಜನವರಿ 2024, 12:47 IST
ಅಕ್ಷರ ಗಾತ್ರ

ಚನ್ನಪಟ್ಟಣ: ನಗರದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ತಾಲ್ಲೂಕಿನ ಪತ್ರಿಕಾ ವಿತರಕರಿಗೆ ಇ-ಶ್ರಮ ಕಾರ್ಡ್ ನೋಂದಣಿ ಕಾರ್ಯಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಈ ವೇಳೆ ರಾಮನಗರ ಜಿಲ್ಲಾ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಎಂ.ಶಿವಮಾದು ಮಾತನಾಡಿ, ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ವಲಯದ ಪತ್ರಿಕಾ ವಿತರಕರಿಗೆ ಇ-ಶ್ರಮ ಕಾರ್ಡ್‌ ನೀಡುತ್ತಿದ್ದು ಇದರ ಸದ್ಬಳಕೆ ಮಾಡಿಕೊಳ್ಳಿ ಎಂದರು. 

ಬಹುದಿನಗಳ ಹೋರಾಟದ ಫಲವಾಗಿ ಕಾರ್ಮಿಕ ಇಲಾಖೆಯು ಪತ್ರಿಕಾ ವಿತರಕರನ್ನು ಅಸಂಘಟಿತ ವಲಯದ ಕಾರ್ಮಿಕರು ಎಂದು ಗುರುತಿಸಿ ಇ-ಶ್ರಮ ಕಾರ್ಡ್ ವಿತರಿಸುತ್ತಿದೆ ಎಂದು ತಿಳಿಸಿದರು.

ಕಾರ್ಮಿಕ ಇಲಾಖೆಯ ಬಿ.ಆರ್.ದಿನೇಶ್, ಬಿ.ಎಸ್.ಅರ್ಪಿತಾ, ಎನ್.ಶ್ವೇತಾ, ವಿ. ಮನೋಜ್ ನೋಂದಣಿ ಕಾರ್ಯದಲ್ಲಿ ಭಾಗವಹಿಸಿದ್ದರು. ತಾಲ್ಲೂಕಿನ ಮೂವತ್ತಕ್ಕೂ ಹೆಚ್ಚು ಪತ್ರಿಕಾ ವಿತರಕರ ಹೆಸರನ್ನು ನೋಂದಣಿ ಮಾಡಿಕೊಳ್ಳಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT