ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕನಕಪುರ: ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ

Published : 25 ಸೆಪ್ಟೆಂಬರ್ 2024, 14:32 IST
Last Updated : 25 ಸೆಪ್ಟೆಂಬರ್ 2024, 14:32 IST
ಫಾಲೋ ಮಾಡಿ
Comments

ಕನಕಪುರ: ರಾಜ್ಯ ಸರ್ಕಾರದ ಅಕ್ಷರ ದಾಸೋಹ ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ಅಜೀಮ್‌ ಪ್ರೇಮ್‌ಜೀ ‌ಫೌಂಡೇಶನ್ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳಿಗೆ ಕೊಡುತ್ತಿರುವ ಮೊಟ್ಟೆ ವಿತರಣಾ ಕಾರ್ಯಕ್ರಮಕ್ಕೆ ಗ್ರಾಮ ವಿದ್ಯಾ ಪ್ರಚಾರಕ ಸಂಘದ ಆವರಣದಲ್ಲಿ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಬುಧವಾರ ಚಾಲನೆ ನೀಡಿದರು.

ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಲು ಊಟದ ಜೊತೆಗೆ ಅಜೀಮ್ ಪ್ರೇಮ್‌ಜೀ ಫೌಂಡೇಶನ್ ವತಿಯಿಂದ ವಾರದ ಆರು ದಿನಗಳು ಮೊಟ್ಟೆ ನೀಡಲಾಗುತ್ತಿದೆ. ಈ ಕಾರ್ಯಕ್ರಮವನ್ನು ಕರಿಯಪ್ಪನವರ ಆರ್‌ಇಎಸ್ ವಿದ್ಯಾ ಸಂಸ್ಥೆಯ ಗ್ರಾಮಾಂತರ ಬಾಲಕರ ಪ್ರೌಢಶಾಲೆಯಲ್ಲಿ ಬುಧವಾರ ಉದ್ಘಾಟನೆ ಮಾಡಲಾಯಿತು.

ಆರ್‌ಇಎಸ್ ಸಂಸ್ಥೆಯ ಅಧ್ಯಕ್ಷ ಎಚ್.ಕೆ. ಶ್ರೀಕಂಠ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಸ್ವರೂಪ, ಅಕ್ಷರ ದಾಸೋಹ ತಾಲ್ಲೂಕು ಸಹಾಯಕ ನಿರ್ದೇಶಕಿ ಸವಿತಾ ಕುಮಾರಿ, ಸಂಸ್ಥೆಯ ಕಾರ್ಯದರ್ಶಿ ಪುಟ್ಟಸ್ವಾಮಿ, ಸಹ ಕಾರ್ಯದರ್ಶಿ ಸೂರ್ಯನಾರಾಯಣಗೌಡ, ಖಜಾಂಚಿ ಮಂಜುನಾಥ್, ನಿರ್ದೇಶಕರಾದ ಕೆ.ಬಿ. ನಾಗರಾಜು, ಎಂ.ಎಲ್. ಶಿವಕುಮಾರ್, ಮುಖ್ಯ ಶಿಕ್ಷಕರಾದ ಜಿ.ಎಸ್.ನಾಗರಾಜು, ಟಿ.ಗುರಮೂರ್ತಿ, ಶಿಕ್ಷಕರಾದ ಟಿವಿಎನ್ ಪ್ರಸಾದ್, ರಾಮಚಂದ್ರ ಅಡ್ಮನಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT