‘ಶ್ರವಣ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ನೀಡಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಹುಡುಕಾಟ ಮುಂದುವರೆದಿದೆ’ ಎಂದು ಮಾಗಡಿ ಪೊಲೀಸರು ತಿಳಿಸಿದರು. ‘ಆರೋಪಿ ಶ್ರವಣ್ ಏಪ್ರಿಲ್‌ನಲ್ಲಿ ಯುವತಿ ಜೊತೆ ಮಾತನಾಡಿದ್ದು ಬಿಟ್ಟರೆ ನಂತರ ಯಾವುದೇ ರೀತಿ ಕರೆ ಮಾಡಿದ ದಾಖಲೆ ಲಭ್ಯವಾಗಿಲ್ಲ. ವಕೀಲೆ ಆತ್ಮಹತ್ಯೆ ಸಂದರ್ಭದಲ್ಲಿ ಇಬ್ಬರ ನಡುವೆ ದೂರವಾಣಿ ಮಾತುಕತೆ ನಡೆದಿಲ್ಲ ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಆರೋಪಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ಠಾಣೆಗೆ ಕರೆಸಿ ವಿಚಾರಣೆ ಮಾಡುವ ಪ್ರಯತ್ನ ನಡೆದಿದೆ’ ಎಂದು ಹೇಳಿದರು.