ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕೀಲರ ಪ್ರತಿಭಟನೆ: ರಾಮನಗರದಲ್ಲಿ ಬೀಡು ಬಿಟ್ಟ ಸಾವಿರಕ್ಕೂ ಹೆಚ್ಚು ಪೊಲೀಸರು

Published 19 ಫೆಬ್ರುವರಿ 2024, 6:20 IST
Last Updated 19 ಫೆಬ್ರುವರಿ 2024, 6:20 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲಾ ವಕೀಲರ ಸಂಘದ 45 ಮಂದಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವ ಐಜೂರು ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ತನ್ವೀರ್ ಹುಸೇನ್ ಅಮಾನತಿಗೆ ಆಗ್ರಹಿಸಿ, ರಾಜ್ಯದ ವಿವಿಧ ಭಾಗಗಳಿಂದ ವಕೀಲರು ರಾಮನಗರದ ಐಜೂರು ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ತಮ್ಮ ಬೇಡಿಕೆ ಈಡೇರಿಕೆಗಾಗಿ ಜಿಲ್ಲಾ ವಕೀಲರ ಸಂಘದ ಆವರಣದಲ್ಲಿ ಒಂದು ವಾರದಿಂದ ಧರಣಿ ನಡೆಸುತ್ತಿದ್ದ ವಕೀಲರು, ತಮ್ಮ ಬೇಡಿಕೆಗೆ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ.

ಅದಕ್ಕಾಗಿ, ಧರಣಿಯನ್ನು ಸಂಘದ ಆವರಣದಿಂದ ಡಿ.ಸಿ ಕಚೇರಿಗೆ ಸ್ಥಳಾಂತರಿಸಿ, ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಜಿಲ್ಲೆಯ ವಕೀಲರನ್ನು ಬೆಂಬಲಿಸಲು ರಾಜ್ಯದ ವಿವಿಧ ಭಾಗಗಳಿಂದ ವಕೀಲರು ರಾಮನಗರಕ್ಕೆ ಬಂದಿದ್ದಾರೆ.

ಜಿಲ್ಲೆಯ ಡಿವೈಎಸ್ಪಿಗಳು, ಇನ್ಸ್‌ಪೆಕ್ಟರ್‌ಗಳು, ಪಿಎಸ್ಐಗಳು, ಕಾನ್ಸ್‌ಟೇಬಲ್‌ಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಗರದಾದ್ಯಂತ ನಿಯೋಜಿಸಲಾಗಿದೆ.

ಧರಣಿ ಮೇಲೆ ನಿಗಾ ಇಡಲು 100 ಬಾಡಿ ಕ್ಯಾಮರಾ, 2 ಡ್ರೋನ್, 40 ಹ್ಯಾಂಡಿಕ್ಯಾಮ್ ಹಾಗೂ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು‌ ಪೊಲೀಸರು ತಿಳಿಸಿದರು.

ಧರಣಿಯಲ್ಲಿ ಭಾಗವಹಿಸಲು ರಾಜ್ಯ ವಕೀಲರ ಸಂಘದ ಅಧ್ಯಕ್ಷ ವಿಶಾಲ್ ರಘು, ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ. ರಘುನಾಥ್ ಸೇರಿದಂತೆ ವಕೀಲರ ಸಂಘಗಳ ಪದಾಧಿಕಾರಿಗಳು ರಾಮನಗರಕ್ಕೆ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT