ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕೀಲರ ಸಂಘದ ರಾಜ್ಯ ಸಮ್ಮೇಳನ

Last Updated 11 ಡಿಸೆಂಬರ್ 2019, 13:11 IST
ಅಕ್ಷರ ಗಾತ್ರ

ರಾಮನಗರ: ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಕಾವೇರಿ ಸಭಾಂಗಣದಲ್ಲಿ ಇದೇ 14 ಮತ್ತು 15ರಂದು ಅಖಿಲ ಭಾರತ ವಕೀಲರ ಸಂಘದ 8ನೇ ರಾಜ್ಯ ಸಮ್ಮೇಳನ ನಡೆಯಲಿದೆ ಎಂದು ಅಖಿಲ ಭಾರತ ವಕೀಲರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚಾನ್ ಪಾಷ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸಮ್ಮೇಳನ ಉದ್ಘಾಟಿಸಲಿದ್ದು, ಅಖಿಲ ಭಾರತ ವಕೀಲರ ಸಂಘದ ರಾಷ್ಟ್ರೀಯ ಅಧ್ಯಕ್ಷ ಬಿಕಾಸ್ ರಂಜನ್ ಭಟ್ಟಾಚಾರ್ಯ, ರಾಜ್ಯ ಘಟಕದ ಅಧ್ಯಕ್ಷ ಎಸ್.ಶಂಕರಪ್ಪ, ಕರ್ನಾಟಕ ಬಾರ್ ಕೌನ್ಸಿಲ್ ಅಧ್ಯಕ್ಷ ಕೃಷ್ಣಪ್ಪ ಭೀಮಪ್ಪ ನಾಯಕ್, ಉಪಾಧ್ಯಕ್ಷ ಬಿ.ವಿ.ಶ್ರೀನಿವಾಸ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಅಖಿಲ ಭಾರತ ವಕೀಲರ ಸಂಘವು ಹಲವಾರು ಸಾಮಾಜಿಕ ಹಾಗೂ ಜನಪರ ಕಾರ್ಯಕ್ರಮಗಳನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ದಿಕ್ಕಿನಲ್ಲಿ ರಾಜ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದಲ್ಲಿ ಮುಖ್ಯವಾಗಿ ರಾಜ್ಯಮತ್ತು ರಾಷ್ಟ್ರದಲ್ಲಿ ವಕೀಲರು ಎದುರಿಸುತ್ತಿರುವ ಸಮಸ್ಯೆಗಳು, ಸಾಂವಿಧಾನಿಕ ಬಿಕ್ಕಟ್ಟುಗಳು, ತಾಲ್ಲೂಕು ಮತ್ತು ಜಿಲ್ಲಾ ವಕೀಲರ ಸಂಘಗಳಗೆ ಅನುದಾನ ಕೋರಿಕೆ, ವಕೀಲರ ಕಲ್ಯಾಣ ನಿಧಿ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಮಂಡಿಸಲಾಗುವುದು ಎಂದರು.

ಅಖಿಲ ಭಾರತ ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವಿ. ಶಿವಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT