ಸೋಮವಾರ, ಜನವರಿ 20, 2020
29 °C

ಕುರಿಗಾಹಿ ಮೇಲೆ ಚಿರತೆ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಚಿರತೆ ದಾಳಿಯಿಂದಾಗಿ ಕುರಿಗಾಯಿ ಗಾಯಗೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ಇಲ್ಲಿನ ಬಸವನಪುರದಲ್ಲಿ ಗ್ರಾಮದಲ್ಲಿ ನಡೆದಿದೆ.

ನರಸಿಂಹ (42) ಗಾಯಗೊಂಡಿರುವ ಕುರಿಗಾಹಿ. ಬಸವನಪುರದ ಗ್ರಾಮದ ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಸಂದರ್ಭದಲ್ಲಿ ಚಿರತೆ, ನರಸಿಂಹ ಮೇಲೆ ಎರಗಿ, ತಲೆ ಭಾಗದಲ್ಲಿ ಪರಚಿ ಗಾಯಗೊಳಿಸಿದೆ. ಘಟನೆಯಿಂದಾಗಿ ಸಣ್ಣಪುಟ್ಟ ತರಚಿರುವ ಗಾಯಗಳಾಗಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗಾಯಗೊಂಡ ನರಸಿಂಹ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು