ಬುಧವಾರ, ಮಾರ್ಚ್ 3, 2021
23 °C

‘ನೇತ್ರದಾನದ ಮೂಲಕ ಅಂಧರಿಗೆ ಬೆಳಕಾಗಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಜನರಿಗೆ ಆರೋಗ್ಯ ಕಾಳಜಿ ಬಹಳ ಮುಖ್ಯವಾಗಿದೆ. ಅವರು ಮರಣಾನಂತರ ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಅಂಧರಿಗೆ ಬೆಳಕಾಗಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಸ್. ಶಂಕರಯ್ಯ ತಿಳಿಸಿದರು.

ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಯೂತ್ ರೆಡ್‌ಕ್ರಾಸ್ ಜಿಲ್ಲಾ ಸಮಿತಿಯಿಂದ ಬೆಂಗಳೂರು ಪಶ್ಚಿಮ ಲಯನ್ಸ್ ಸೂಪರ್ ಸ್ಪೆಷಾಲಿಟಿ ಕಣ್ಣಾಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆಯ ಸಹಯೋಗದಲ್ಲಿ ಭಾನುವಾರ ನಡೆದ ಉಚಿತ ಕಣ್ಣು ಪರೀಕ್ಷೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಆಧುನೀಕರಣ ಮತ್ತು ನಗರೀಕರಣದ ಜೀವನದಲ್ಲಿ ಮನುಷ್ಯ ದಿನದಿಂದ ದಿನಕ್ಕೆ ಒತ್ತಡಕ್ಕೆ ಒಳಗಾಗುತ್ತಿದ್ದಾನೆ. ಬದಲಾದ ಜೀವನಶೈಲಿ, ಆಹಾರ ಪದ್ಧತಿಯಿಂದ ಮನುಷ್ಯ ಉತ್ತಮವಾದ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಸಮಾಜ ಸೇವಕ ಲಕ್ಷ್ಮಣ್ , ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ. ಶೇಷಾದ್ರಿ ಅಯ್ಯರ್, ಉಪಾಧ್ಯಕ್ಷ ವಿ. ಬಾಲಕೃಷ್ಣ, ಕಾರ್ಯದರ್ಶಿ ಕೆ.ಎಚ್. ಚಂದ್ರಶೇಖರಯ್ಯ, ಖಜಾಂಚಿ ಎಂ. ಪರಮಶಿವಯ್ಯ, ಯೂತ್ ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷ ಎಸ್. ರುದ್ರೇಶ್ವರ, ಪದಾಧಿಕಾರಿಗಳಾದ ಸಿಖ್ ಬಕ್ತುಲ್ಲಾ ಖಾನ್, ಅಬ್ದುಲ್ ಸತ್ತಾರ್, ಬಶೀರ್ ಅಹಮದ್ ಖಾನ್, ಕೆಂಪೇಗೌಡ, ಲಯನ್ಸ್ ಸೂಪರ್ ಸ್ಪೆಷಾಲಿಟಿ ಕಣ್ಣಾಸ್ಪತ್ರೆಯ ಡಾ.ಜಸ್ಮಿತಾ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.