ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ₹1.18 ಕೋಟಿ ಮೌಲ್ಯದ ಮದ್ಯ ವಶ

Published 20 ಮಾರ್ಚ್ 2024, 5:59 IST
Last Updated 20 ಮಾರ್ಚ್ 2024, 5:59 IST
ಅಕ್ಷರ ಗಾತ್ರ

ರಾಮನಗರ: ಪರವಾನಗಿ ನಿಯಮ ಉಲ್ಲಂಘಿಸಿ ಎರಡು ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು ₹1.18 ಕೋಟಿ ಮೌಲ್ಯದ 29,380 ಲೀಟರ್ ಮದ್ಯವನ್ನು ಅಬಕಾರಿ ಅಧಿಕಾರಿಗಳು ಭಾನುವಾರ ಲಾರಿ ಸಮೇತ ವಶಪಡಿಸಿಕೊಂಡಿದ್ದಾರೆ.

ನಗರದ ಹೊರವಲಯದಲ್ಲಿ ಎರಡು ಲಾರಿಗಳಲ್ಲಿ ಮದ್ಯದ ಬಾಕ್ಸ್‌ಗಳನ್ನು ಸಾಗಿಸಲಾಗುತ್ತಿತ್ತು. ಲಾರಿಗಳನ್ನು ತಡೆದು ಪರಿಶೀಲನೆ ನಡೆಸಿದಾಗ ಚನ್ನಪಟ್ಟಣದ ಎಂಎಸ್‌ಐಎಲ್‌ ಸರ್ಕಾರಿ ಗೋದಾಮಿಗೆ ಹೊರಟಿರುವುದು ಗೊತ್ತಾಯಿತು.

ದಾಖಲೆ ಪರಿಶೀಲಿಸಿದಾಗ ಪರವಾನಗಿ ಪತ್ರದಲ್ಲಿ ಡಿಸ್ಟಿಲರಿ ಅಧಿಕಾರಿಯ ಸಹಿ ಇರಲಿಲ್ಲ. ಹಾಗಾಗಿ, ಪರವಾನಗಿ ನಿಯಮ ಉಲ್ಲಂಘನೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಂಬಂಧಪಟ್ಟ ಇಲಾಖೆಯವರು ದಂಡ ಪಾವತಿಸಿ, ಮದ್ಯ ತುಂಬಿದ ಲಾರಿಗಳನ್ನು ಬಿಡಿಸಿಕೊಂಡು ಹೋಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಮತ್ತೊಂದೆಡೆ ಪೊಲೀಸರು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ₹2,664 ಮೌಲ್ಯದ 4.068 ಲೀಟರ್ ಮದ್ಯ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT