ಚನ್ನಪಟ್ಟಣ: ಲೋಕಾಯುಕ್ತ ಅಧಿಕಾರಿಗಳ ತಂಡ ನಗರದ ಉಪ ನೋಂದಣಾಧಿಕಾರಿಗಳ ಕಚೇರಿ ಮೇಲೆ ಗುರುವಾರ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದರು.

ಕಚೇರಿಯಲ್ಲಿ ಲಂಚಾವತಾರ ತಾಂಡವಾಡುತ್ತಿದೆ, ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಕಚೇರಿಯ ಒಳಗೆ ಓಡಾಡಿ ಅಲ್ಲಲ್ಲಿ ಇದ್ದ ಕಡತಗಳನ್ನು ಪರಿಶೀಲನೆ ನಡೆಸಿ, ಉಪ ನೋಂದಣಾಧಿಕಾರಿ ಮೇನಕಾ ಹಾಗೂ ಕಚೇರಿ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು.

ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ. ಲಂಚ ಇಲ್ಲದೆ ಯಾವುದೇ ಕೆಲಸಗಳು ಆಗುವುದಿಲ್ಲ. ಜೊತೆಗೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಇದರಲ್ಲಿ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಕೆಲವರು ಶಾಮೀಲಾಗಿದ್ದಾರೆ ಎಂದು ಸಾರ್ವಜನಿಕರು ನೀಡಿದ ದೂರಿನ ಹಿನ್ನೆಲೆ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಕಚೇರಿ ಆವರಣದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಫಲಕಗಳನ್ನು ಹಾಕಿಲ್ಲದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಉಪ ನೋಂದಣಾಧಿಕಾರಿಯನ್ನು ಪ್ರಶ್ನಿಸಿ, ಶೀಘ್ರ ಸಾರ್ವಜನಿಕ ಮಾಹಿತಿ ಫಲಕಗಳನ್ನು ಹಾಕುವಂತೆ ತಾಕೀತು ಮಾಡಿದರು. ರಾತ್ರಿಯಾದರೂ ದಾಖಲಾತಿ, ಕಡತಗಳ ಪರಿಶೀಲನೆ ಮುಂದುವರೆದಿತ್ತು. ದಾಳಿಯ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಯಾವುದೇ ಮಾಹಿತಿ ನೀಡಲಿಲ್ಲ.

ಲೋಕಾಯುಕ್ತ ಎಸ್.ಪಿ.ಸ್ನೇಹಾ ನೇತೃತ್ವದಲ್ಲಿ ರಾಮನಗರ ಹಾಗೂ ಮಂಡ್ಯ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.