ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌: ಜನರಿಂದ ಉತ್ತಮ ಸ್ಪಂದನೆ

Last Updated 24 ಮೇ 2020, 15:08 IST
ಅಕ್ಷರ ಗಾತ್ರ

ಕನಕಪುರ: ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟಲು ಸರ್ಕಾರ ಭಾನುವಾರ‌ ಲಾಕ್‌ಡೌನ್ ಜಾರಿ‌ ಮಾಡಿದ್ದರಿಂದ ನಗರ ಸೇರಿದಂತೆ ತಾಲ್ಲೂಕಿನ ಹೋಬಳಿ ಕೇಂದ್ರಗಳಲ್ಲೂ ಯಾವುದೇ ಅಂಗಡಿ ಮುಂಗಟ್ಟು ತೆರೆದಿರಲಿಲ್ಲ. ನಾಗರಿಕರು ಮನೆಯಲ್ಲಿಯೇ ಇದ್ದು, ಲಾಕ್‌ಡೌನ್‌ಗೆ ಬೆಂಬಲ ನೀಡಿದರು.

ಮೇ 23ರ ಶನಿವಾರ ರಾತ್ರಿ 7ರಿಂದ ಸೋಮವಾರ ಬೆಳಿಗ್ಗೆ 7 ಗಂಟೆವರೆಗೂ ಕರ್ಫ್ಯೂ ಜಾರಿಯಾಗಿತ್ತು. ಔಷಧ ವ್ಯಾ‍ಪಾರಿಗಳೂ ಮಳಿಗೆಗಳನ್ನು ಮುಚ್ಚಿದ್ದರು. ಅಗತ್ಯ ವಸ್ತುಗಳನ್ನು ಖರೀದಿಸಲು ಜನರು ಬರಲಿಲ್ಲ. ಲಾಕ್‌ಡೌನ್‌ ಹಿಂದಿನ ದಿನವೇ ಅಗತ್ಯ ವಸ್ತುಗಳನ್ನು ಖರೀದಿಸಿದ್ದರು. ಆದರೆ,ಮಾಂಸದ ಅಂಗಡಿಗಳು ತೆರೆದಿದ್ದವು.

ಕನಕಪುರ ನಗರ ಸೇರಿದಂತೆ ಹೋಬಳಿ ಕೇಂದ್ರಗಳಾದ ಹಾರೋಹಳ್ಳಿ, ಮರಳವಾಡಿ, ಕೋಡಿಹಳ್ಳಿ, ದೊಡ್ಡಾಲಹಳ್ಳಿ, ಸಾತನೂರಿನಲ್ಲಿ ವಹಿವಾಟು ಸ್ತಬ್ಧವಾಗಿತ್ತು. ಮೇ 24 ಮತ್ತು 31ರಂದು ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸುವಂತೆ ಎಲ್ಲ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಸೂಚಿಸಿತ್ತು. ಶನಿವಾರ ರಾತ್ರಿಯಿಂದಲೇ ಧ್ವನಿವರ್ಧಕದ‌ ಮೂಲಕ‌ ಪೊಲೀಸರು ಜನರಲ್ಲಿ ಜಾಗೃತಿ ಮೂಡಿಸಿದ್ದರು. ಭಾನುವಾರ ಬೆಳಿಗ್ಗೆಯಿಂದಲೇ‍ಪೊಲೀಸರು ಗಸ್ತಿನಲ್ಲಿದ್ದರು.ಆಯಾಕಟ್ಟಿನ ಪ್ರಮುಖ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆಗೊಳಿಸಲಾಗಿತ್ತು. ಮೊದಲೇ ನಿಶ್ಚಯವಾಗಿದ್ದ ಮದುವೆ ಸಮಾರಂಭಕ್ಕೆ ಅವಕಾಶ ನೀಡಿದ್ದರಿಂದ ಅಲ್ಲಲ್ಲಿ ಸರಳ ವಿವಾಹ ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT