ಕುದೂರು (ಮಾಗಡಿ): ಲಾಕ್‌ಡೌನ್ ಉಲ್ಲಂಘಿಸಿ ಅನಗತ್ಯವಾಗಿ ವಾಹನದಲ್ಲಿ ಓಡಾಡುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಸಬ್‌ಇನ್‌ಸ್ಪೆಕ್ಟರ್ ಮಂಜುನಾಥ ಎಚ್ಚರಿಸಿದರು.

ಕುದೂರಿನ ಸಂತೆ ಸರ್ಕಲ್‌ನಲ್ಲಿ ನಡೆಯಬೇಕಿದ್ದ ಸಂತೆಯನ್ನು ಬೆಳಿಗ್ಗೆಯಿಂದಲೇ ರದ್ದುಪಡಿಸಲಾಗಿತ್ತು. ಆದರೂ, ರಸ್ತೆಗಿಳಿದ ದ್ವಿಚಕ್ರ ವಾಹನ ಸವಾರರನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಕಳುಹಿಸಿದರು.

‘ಗ್ರಾಮದಲ್ಲಿ ಜನತೆ ಮನೆಯಿಂದ ಹೊರಗೆ ಬಂದರೆ ಕಠಿಣ ಕ್ರಮಕೈಗೊಳ್ಳುತ್ತೇವೆ. ಸರ್ಕಾರ ಲಾಕ್‌ಡೌನ್‌ಗೆ ಸಹಕರಿಸುವಂತೆ ಮನವಿ ಮಾಡಿದ್ದರೂ, ಕೆಲವರು ಮನೆಯಿಂದ ಹೊರಗೆ ಬರುತ್ತಿದ್ದಾರೆ. ಕಾನೂನು ಉಲ್ಲಂಘಿಸುವವರನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ಪ್ರಕರಣ ದಾಖಲಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.