ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬದಲಾದ ಪರಿಸ್ಥಿತಿಯಲ್ಲಿ JDS -BJP ಮೈತ್ರಿ ಅನಿವಾರ್ಯ: ನಿಖಿಲ್ ಕುಮಾರಸ್ವಾಮಿ

Published 1 ಅಕ್ಟೋಬರ್ 2023, 12:45 IST
Last Updated 1 ಅಕ್ಟೋಬರ್ 2023, 12:45 IST
ಅಕ್ಷರ ಗಾತ್ರ

ರಾಮನಗರ: ಮೈತ್ರಿ ಕುರಿತು ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಹಿಂದೆ ಕಾಂಗ್ರೆಸ್ ಜೊತೆ ಆಕಸ್ಮಿಕವಾಗಿ ಮೈತ್ರಿ ಆಗಿತ್ತು. ಈಗ ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿ ಜೊತೆ ಮೈತ್ರಿ ಅನಿವಾರ್ಯವಾಗಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಬಿಜೆಪಿ- ಜೆಡಿಎಸ್ ಮೈತ್ರಿ ಬೆನ್ನಲ್ಲೇ ಬಿಡದಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ, ಎಚ್.ಡಿ. ದೇವೇಗೌಡ ಅವರ ನೇತೃತ್ವದಲ್ಲಿ ಭಾನುವಾರ ನಡೆದ ಪಕ್ಷದ ಶಾಸಕರು, ಪದಾಧಿಕಾರಿಗಳು ಹಾಗೂ ಮುಖಂಡರ ಸಭೆ ವೇಳೆ‌ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೈತ್ರಿ ಬಗ್ಗೆ ತೀರ್ಮಾನ ಮಾಡಿದ್ದಾರೆ. ದೇವೇಗೌಡ ಅವರು ನಮ್ಮ ಜೊತೆ ಇರಬೇಕು ಎಂಬುದು ಮೋದಿ ಅವರ ಅಪೇಕ್ಷೆಯಾಗಿದ್ದು, ನಮ್ಮನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದಾರೆ ಎಂದರು.

ದುರದೃಷ್ಟಕರ ವಿಷಯವೇನೆಂದರೆ ರಾಜ್ಯದಲ್ಲಿ ಆಮಿಷದ ಕಾರಣಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.

ನಮ್ಮ ರಾಮನೊ ಸಹ ಗಿಫ್ಟ್ ಕಾರ್ಡ್ ಹಂಚಿದ್ದರು. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ-ಜೆಡಿಎಸ್ ಒಂದಾಗಿದೆ ಎಂದು ತಿಳಿಸಿದರು.

ಮೈತ್ರಿಗೆ ಅಸಮಾಧಾನ ವ್ಯಕ್ತಪಡಿಸಿದ್ದ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರ ಜೊತೆ ಈಗಾಗಲೇ ಮಾತನಾಡಿದ್ದೇನೆ. ಅವರು ಸಹ ಒಂದಿಷ್ಟು ಸಲಹೆ- ಸೂಚನೆ ನೀಡಿದ್ದಾರೆ. ಸ್ಥಳೀಯವಾಗಿ ಇರುವ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಅದರ ಹೊರತಾಗಿ ಅವರಿಗೆ ಬೇರಾವುದೇ ಅಸಮಾಧಾನ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಇಂದಿನ ಸಭೆಯಲ್ಲ ಪಕ್ಷದ ವರಿಷ್ಠರ ಜೊತೆ ನಾಯಕರು ತಮ್ಮ ಭಾವನೆಗಳನ್ನ ವ್ಯಕ್ತಪಡಿಸಿದ್ದಾರೆ‌. ಅವರ ಅಭಿಪ್ರಾಯಗಳಿಗೆ ಮನ್ನಣೆ ನೀಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT